Sunday, June 22, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ರೈಡ್

ಬೆಂಗಳೂರು : ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು 25ಕ್ಕೂ ಅಧಿಕ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದು, ಹೆಚ್ಚುವರಿ ಆಸ್ತಿ ಗಳಿಕೆಯ ದೂರುಗಳ ಹಿನ್ನೆಲೆಯಲ್ಲಿ ಹತ್ತು ಹಲವು ಅಧಿಕಾರಿಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಭ್ರಷ್ಟಾಚಾರ, ಆಕ್ರಮ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವಡೆ ದಾಳಿ ನಡೆಸಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿದ ಬಾಕಿ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page