ಬೆಂಗಳೂರು: ‘ರಾಜ್ಯದಲ್ಲಿ ಲೋಕಾಯುಕ್ತವೇ ಇದ್ದಿದ್ದರೆ ಸಿದ್ದರಾಮಯ್ಯ ಅವರು ಜೈಲೂಟ ತಿನ್ನುತ್ತಿದ್ದರು’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
2016 ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಲೋಕಾಯುಕ್ತದ ಬದಲಿಗೆ ಸ್ಥಾಪಿಸಿದ ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ವನ್ನು ಕರ್ನಾಟಕ ಹೈಕೊರ್ಟ್ ಗುರುವಾರ ರದ್ದುಗೊಳಿಸಿ ಆದೇಶ ಹೊರಡಿಸಿರುವ ಹಿನ್ನೆಲೆ, ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಟೀಕಿಸಿದೆ.
‘ಸಿದ್ದರಾಮಯ್ಯನವರೇ, ಸ್ವತಂತ್ರ ತನಿಖಾ ಸಂಸ್ಥೆಯಾದ ಎಸಿಬಿ ದೇಶದ ಅನೇಕ ರಾಜ್ಯಗಳಲ್ಲೂ ಇದ್ದಿರಬಹುದು. ಆದರೆ ರಾಜ್ಯದಲ್ಲೂ ಸ್ಥಾಪಿಸಿದ್ದು ಮಾತ್ರ ನಿಮ್ಮ ಮೇಲಿನ ಭ್ರಷ್ಟಚಾರ ಪ್ರಕರಣಗಳನ್ನು ಮುಚ್ಚಿಹಾಕಲು. ಲೋಕಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು’ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಳಿ ನಡೆಸಿದೆ.