Friday, March 21, 2025

ಸತ್ಯ | ನ್ಯಾಯ |ಧರ್ಮ

ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ 24 ಗಂಟೆಗಳ ಕಾಲ ಬಂದ್

ಇಂದು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದ ಹತ್ತಿರದ ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ, ಕನಿಷ್ಠ 24 ಗಂಟೆಗಳ ಕಾಲವಿಮಾನ ನಿಲ್ದಾಣವನ್ನ ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡರ್ನಲ್ಲಿ ತಿಳಿಸಲಾಗಿದೆ.

ಈ ಹಿನ್ನಲೆಯಲ್ಲಿ ನಿಲ್ದಾಣಕ್ಕೆ ಬರುವ ಮತ್ತು ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಹೀಥ್ರೂ ವಿಮಾನ ಸಂಸ್ಥೆ ಪ್ರಯಾಣಿಕರಿಗೆ ಮಾಹಿತಿ ನೀಡಿದೆ.

ಈ ಕುರಿತು ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡರ್ನಲ್ಲಿ ಮಾಹಿತಿ ನೀಡಿರುವ ಹೀಥ್ರೂ, “ವಿಮಾನ ನಿಲ್ದಾಣಕ್ಕೆ ಸರಬರಾಜು ಮಾಡುವ ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ, ಹೀಥ್ರೂ ವಿಮಾನ ನಿಲ್ದಾಣವು ಗಮನಾರ್ಹ ವಿದ್ಯುತ್ ವ್ಯತ್ಯಯವನ್ನು ಎದುರಿಸುತ್ತಿದೆ. ನಮ್ಮ ಪ್ರಯಾಣಿಕರು ಮತ್ತು ಸಹೋದ್ಯೋಗಿಗಳ ಸುರಕ್ಷತೆಯನ್ನು ಕಾಪಾಡಿಕೊಳ್ಳಲು, ಮಾರ್ಚ್ 21 ರಂದು 23 ಗಂಟ 59 ನಿಮಿಷದ ವರೆಗೆ, ಹೀಥ್ರೂ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು, ಈ ಹಿನ್ನಲೆಯಲ್ಲಿ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅವರ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಬೇಕು ಮತ್ತು ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ” ಎಂದು ತಿಳಿಸಿದೆ.

ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡರ್ ಪ್ರಕಾರ, ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಹೀಥ್ರೂಗೆ ತೆರಳುವ ಕನಿಷ್ಠ 120 ವಿಮಾನಗಳನ್ನು ಬೇರೆಡೆಗೆ ತಿರುಗಿಸಬೇಕಾಗುತ್ತದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page