ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಇದ್ದ ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಅಪಘಾತ ಕೆಲವೇ ತಿಂಗಳ ಹಿಂದೆ ನೆಲಮಂಗಲದ ಟ್ರಕ್ ಅಪಘಾತ ನೆನಪಿಸುವಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ
ಅಪಘಾತದ ಪರಿಣಾಮ ಕಾರು ನಜ್ಜು ಗುಜ್ಜಾಗಿದ್ದು, ಅದೃಷ್ಟವಶಾತ್ ವ್ಯಾಗನರ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ 15 ನಿಮಿಷದಲ್ಲಿ ಈ ಕಾರ್ಯಾಚರಣೆ ನಡೆದಿದೆ.