Home ದೇಶ ದಶಕದಲ್ಲೇ ಮೊದಲ ಬಾರಿಗೆ ಭಾರತದಲ್ಲಿ ಎಲ್‌ಪಿಜಿ ಸಂಪರ್ಕಗಳ ಸಂಖ್ಯೆ ಇಳಿಕೆ

ದಶಕದಲ್ಲೇ ಮೊದಲ ಬಾರಿಗೆ ಭಾರತದಲ್ಲಿ ಎಲ್‌ಪಿಜಿ ಸಂಪರ್ಕಗಳ ಸಂಖ್ಯೆ ಇಳಿಕೆ

0

ದೆಹಲಿ: ಭಾರತದಲ್ಲಿ ಕಳೆದ ಒಂದು ದಶಕದಲ್ಲೇ ಮೊದಲ ಬಾರಿಗೆ ಎಲ್‌ಪಿಜಿ ಸಿಲಿಂಡರ್ ಬಳಸುವ ಕುಟುಂಬಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. 2026ರ ಏಪ್ರಿಲ್‌ನಿಂದ ಆಗಸ್ಟ್ ನಡುವಿನ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಸಕ್ರಿಯ ಗ್ರಾಹಕರ ಸಂಖ್ಯೆ 62 ಲಕ್ಷದಷ್ಟು ಕಡಿಮೆಯಾಗಿದ್ದು, ಒಟ್ಟು ಬಳಕೆದಾರರ ಸಂಖ್ಯೆ 32.77 ಕೋಟಿಗೆ ಇಳಿಕೆಯಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಉಜ್ವಲ ಯೋಜನೆಯಲ್ಲೂ ಸುಮಾರು 6 ಲಕ್ಷ ಗ್ರಾಹಕರು ಕಡಿಮೆಯಾಗಿದ್ದಾರೆ. ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಯುದ್ಧದ ಪರಿಣಾಮವಾಗಿ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಆಗುತ್ತಿದ್ದ ಎಲ್‌ಪಿಜಿ ಆಮದಿನಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವುದು ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಯುದ್ಧ ಆರಂಭವಾಗುವುದಕ್ಕೂ ಮುನ್ನ ಭಾರತ ಆಮದು ಮಾಡಿಕೊಳ್ಳುತ್ತಿದ್ದ ಒಟ್ಟು ಎಲ್‌ಪಿಜಿಯಲ್ಲಿ ಶೇಕಡಾ 90 ರಷ್ಟು ಪಾಲು ಗಲ್ಫ್ ಪ್ರಾಂತ್ಯದಿಂದಲೇ ಬರುತ್ತಿತ್ತು.

ಆಮದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಹೊಸ ಎಲ್‌ಪಿಜಿ ಸಂಪರ್ಕಗಳನ್ನು ನೀಡುವುದನ್ನು ಸ್ಥಗಿತಗೊಳಿಸಿದ್ದು, ನಿಷ್ಕ್ರಿಯವಾಗಿರುವ ಖಾತೆಗಳನ್ನು ಗುರುತಿಸಿ ರದ್ದುಪಡಿಸಲು ಕಟ್ಟುನಿಟ್ಟಿನ ಪರಿಶೀಲನೆ ಆರಂಭಿಸಿವೆ. ಇದೇ ವೇಳೆ, ಪೈಪ್‌ಲೈನ್ ಮೂಲಕ ನೈಸರ್ಗಿಕ ಅನಿಲ (ಪಿಎನ್‌ಜಿ) ಲಭ್ಯವಿರುವ ನಗರಗಳಲ್ಲಿ ಅನೇಕ ಗ್ರಾಹಕರು ಎಲ್‌ಪಿಜಿಯಿಂದ ಪಿಎನ್‌ಜಿ ಸಂಪರ್ಕಕ್ಕೆ ಬದಲಾಗುತ್ತಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಸುಮಾರು 6 ಲಕ್ಷ ಹೊಸ ಪಿಎನ್‌ಜಿ ಸಂಪರ್ಕಗಳು ಸೇರ್ಪಡೆಗೊಂಡಿವೆ. ಪ್ರಮುಖವಾಗಿ ದಕ್ಷಿಣ ಮತ್ತು ಪಶ್ಚಿಮ ಭಾರತದ ವ್ಯಾಪ್ತಿಯಲ್ಲಿ ಎಲ್‌ಪಿಜಿ ಗ್ರಾಹಕರ ಸಂಖ್ಯೆಯಲ್ಲಿ ಗರಿಷ್ಠ ಪ್ರಮಾಣದ ಇಳಿಕೆ ದಾಖಲಾಗಿದೆ.

You cannot copy content of this page

Exit mobile version