Home ರಾಜ್ಯ ನಾನು ಮುಖ್ಯಮಂತ್ರಿಯಾಗಬೇಕೆಂದು ಎಂ.ಪಿ ಪ್ರಕಾಶ್ ರವರು ಬಯಸಿದ್ದರು ಸೂಚಿಸಿದ್ದರು – ಸಿದ್ದರಾಮಯ್ಯ

ನಾನು ಮುಖ್ಯಮಂತ್ರಿಯಾಗಬೇಕೆಂದು ಎಂ.ಪಿ ಪ್ರಕಾಶ್ ರವರು ಬಯಸಿದ್ದರು ಸೂಚಿಸಿದ್ದರು – ಸಿದ್ದರಾಮಯ್ಯ

ವಿಜಯನಗರ : 2004ರಲ್ಲಿ ನಾವು ಎಲ್ಲರೂ ಜನತಾದಳ ಎಸ್‌ ಪಕ್ಷದಲ್ಲಿದ್ದೆವು. ದೇವೇಗೌಡರು, ಇಬ್ರಾಹಿಂ, ಎಂ.ಪಿ. ಪ್ರಕಾಶ್‌, ಸಿಂಧ್ಯಾ ಮತ್ತು ನಾನು ಸೇರಿ ಪಕ್ಷದ ಪ್ರಮುಖ ನಾಯಕರಾಗಿದ್ದೆವು. ಆ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಬೇಕು ಎಂಬ ಚರ್ಚೆ ನಡೆದಾಗ, ಎಂ.ಪಿ. ಪ್ರಕಾಶ್‌ ಅವರು ನನ್ನ ಹೆಸರನ್ನೇ ಸೂಚಿಸಿ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಿವಂಗತ ಎಂ.ಪಿ. ಪ್ರಕಾಶ್‌ ಅವರ 86ನೇ ಜನ್ಮ ದಿನೋತ್ಸವ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಆಯೋಜಿಸಿದ್ದ ಎಂ.ಪಿ. ಪ್ರಕಾಶ್‌ ಅವರ ಪುತ್ಥಳಿಯನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂ ಪಿ ಪ್ರಕಾಶ್ ತಮ್ಮನ್ನು ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಅವರು ಎಂದಿಗೂ ಹೇಳಿಕೊಂಡವರಲ್ಲ.

ನಂತರ ಜನತಾದಳ ಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ಧರಂಸಿಂಗ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆ ಸರ್ಕಾರದಲ್ಲಿ ನಾನು ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರೆ, ಎಂ.ಪಿ. ಪ್ರಕಾಶ್‌ ಅವರು ಸಚಿವರಾಗಿ ಸೇವೆ ಸಲ್ಲಿಸಿದ್ದರು ಎಂದು ನೆನಪು ಮಾಡಿಕೊಂಡರು.

You cannot copy content of this page

Exit mobile version