Thursday, December 18, 2025

ಸತ್ಯ | ನ್ಯಾಯ |ಧರ್ಮ

ಮಾದಾರ ಮಹಾಸಭಾ ಸದಸ್ಯತ್ವ ನೋಂದಣಿ, ಸಂಘಟನಾ ಅಭಿಯಾನ – ಟಿ.ಆರ್ ವಿಜಯಕುಮಾರ್

ಹಾಸನ: ಕರ್ನಾಟಕ ಮಾದಾರ ಮಹಾಸಭಾ (ರಿ) ರಾಜ್ಯ ಸಮಿತಿ ಹಾಗೂ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ, ದಿನಾಂಕ 10-12-2025 ರಂದು ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯ ಅಜೆಂಡಾ ಅನ್ವಯ, ಕರ್ನಾಟಕ ಮಾದಾರ ಮಹಾಸಭಾದ ಸದಸ್ಯತ್ವ ನೋಂದಣಿ ಮತ್ತು ಸಂಘಟನಾ ಅಭಿಯಾನವನ್ನು ರಾಜ್ಯಾದ್ಯಂತ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಎಂದು ವಿಜಯಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ 22 ಡಿ. (ಸೋಮವಾರ) ಬೆಳಗ್ಗೆ 11 ಗಂಟೆಗೆ ಹಾಸನ ನಗರದ ಸ್ವಾಭಿಮಾನ ಭವನದಲ್ಲಿ ಮಹತ್ವದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯಲ್ಲಿ ಎಲ್ಲಾ ಏಳು ತಾಲ್ಲೂಕುಗಳ ಮಾದಿಗ ಸಮುದಾಯದ ಎಲ್ಲ ಪಕ್ಷಗಳ ರಾಜಕಾರಣಿಗಳು, ಹೋರಾಟಗಾರರು, ವಿದ್ಯಾರ್ಥಿಗಳು, ನೌಕರ ಬಾಂಧವರು, ಸಮಾಜಮುಖಿ ಚಿಂತಕರು ಹಾಗೂ ಮಹಿಳೆಯರು ಭಾಗವಹಿಸಲಿದ್ದಾರೆ. ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಎರಡು ಸಾವಿರ ಸದಸ್ಯತ್ವ ನೋಂದಣಿ ಮಾಡುವ ಗುರಿಯೊಂದಿಗೆ, ಒಂದು ಕುಟುಂಬಕ್ಕೆ ಒಬ್ಬರಂತೆ ರೂ.500 ಶುಲ್ಕದ ಮೂಲಕ ಸದಸ್ಯತ್ವ ನೋಂದಣಿ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ರಚನೆ, ಪದಾಧಿಕಾರಿಗಳ ಆಯ್ಕೆ, ಹಾಗೂ ರಾಜ್ಯ ಸಮಿತಿಯ ಆದೇಶದಂತೆ ಮುಂದಿನ ಸಂಘಟನಾ ಕಾರ್ಯಚಟುವಟಿಕೆಗಳ ಕುರಿತು ವಿವರವಾದ ಚರ್ಚೆ ನಡೆಯಲಿದೆ.

ಪಕ್ಷಾತೀತವಾಗಿ ಸಮುದಾಯದ ಎಲ್ಲ ಬಾಂಧವರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಾಲೂಕಿನಿಂದ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿ ಸಂಘಟನೆಯನ್ನು ಬಲಪಡಿಸಬೇಕೆಂದು ಹಾಸನ ಜಿಲ್ಲಾ ಕರ್ನಾಟಕ ಮಾದಾರ ಮಹಾಸಭಾ ಮನವಿ ಮಾಡಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಎಂ.ಆರ್. ವೆಂಕಟೇಶ್ (ರಾಜ್ಯ ಸಮಿತಿ ಸದಸ್ಯರು, ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರು), ಎಂ.ಟಿ.ಆರ್. ವಿಜಯಕುಮಾರ್ (ಜಿಲ್ಲಾಧ್ಯಕ್ಷರು), ವತ್ಸಲಾ ಶೇಖರಪ್ಪ (ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು), ಶ್ರೀನಿವಾಸ್ (ಚನ್ನರಾಯಪಟ್ಟಣ), ಸಿ.ಆರ್. ಮಂಜುನಾಥ್ (ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು), ಭೈರೇಶ್ (ಜಿಲ್ಲಾ ಎಸ್‌ಸಿ–ಎಸ್‌ಟಿ ಮೇಲ್ವಿಚಾರಣಾ ಸಮಿತಿ ಸದಸ್ಯರು), ಕಡಗ ಸತೀಶ್ ಹಾಗೂ ಪ್ರಕಾಶ್ ವಿರೂಪಾಕ್ಷಿಪುರ ಸೇರಿದಂತೆ ಸಮುದಾಯದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page