ಕೆಪಿಸಿಸಿಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಆಯ್ಕೆಮಾಡಲಾಗಿದೆ ಎಂದು  ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಣೆ

ಈ ಕುರಿತು ಟ್ವೀಟ್‌ ಮಾಡುವ ಮೂಲಕ ಅಭಿನಂದಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಮಧು ಬಂಗಾರಪ್ಪನವರಿಗೆ ಅಭಿನಂದನೆಗಳು. ಜನಜಾಗೃತಿ, ಸಂಘಟನೆ ಮತ್ತು ಹೋರಾಟದ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ನಿಮ್ಮಿಂದಾಗಲಿ ಎಂದು ಶುಭ ಹಾರೈಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು