Friday, June 14, 2024

ಸತ್ಯ | ನ್ಯಾಯ |ಧರ್ಮ

ಮಹಡಿ ಕುಸಿತ : ಅವಶೇಷಗಳ ಅಡಿ ಸಿಲುಕಿದ 7 ಕ್ಕೂ ಹೆಚ್ಚು ಕಾರ್ಮಿಕರು

ದೆಹಲಿ : ದೆಹಲಿಯ ಜೋಹ್ರಿಪುರದಲ್ಲಿ ಕಟ್ಟಡ ಕುಸಿದು ಕಾರ್ಮಿಕರು ಅವಶೇಷಗಳ ಅಡಿ ಸಿಲುಕಿಕೊಂಡ ಕಾರಣ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜೋಹ್ರಿಪುರದ ಕಟ್ಟಡವೊಂದು ನವೀಕರಣದ ಹಂತದಲ್ಲಿದ್ದು ಕಾರ್ಮಿಕರು ಮಹಡಿಯ ಮೇಲೆ ಕೆಲಸ ಮಾಡುತ್ತಿದ್ದಾಗ ಕಟ್ಟಡ ಕುಸಿದಿದೆ. ಈ ವೇಳೆ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು ಸಿಕ್ಕಿ ಹಾಕಿಕೊಂಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ 7 ಜನರನ್ನು ರಕ್ಷಿಸಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್‌ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಇಬ್ಬರು ಅವಶೇಷಗಳ ನಡುವೆಯೇ ಸಿಲುಕಿದ್ದಾರೆಂಬ ಆತಂಕದಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು