ಬುಧವಾರ ಮುಂಜಾನೆ ಸಂಭವಿಸಿದ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಮೂವತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 60 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಸಂದರ್ಭದಲ್ಲಿ ಸಂಗಮದಲ್ಲಿ ಕಾಲ್ತುಳಿತದಂತಹ ಘಟನೆ ನಡೆದ ಶುರುವಿನಲ್ಲಿ ಸುಮಾರು 17 ಮಂದಿಯಷ್ಟೆ ಸಾವನ್ನಪ್ಪಿದ ಬಗ್ಗೆ ಮಾಹಿತಿ ಹರಿದಾಡಿತ್ತು. ಇದೀಗ ಸಿಕ್ಕ ಮಾಹಿತಿಯಂತೆ ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ಖಚಿತ ಮಾಹಿತಿಯಾದರಿಸಿ ಸುಮಾರು 60 ಮಂದಿ ಮೃತಪಟ್ಟ ಬಗ್ಗೆ ಮಾಹಿತಿ ಸಿಕ್ಕಿದೆ.
ಈಗಾಗಲೇ ಮೃತಪಟ್ಟ 25 ಜನರನ್ನು ಗುರುತಿಸಲಾಗಿದ್ದು, ಇನ್ನೂ ಐವರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭದ ಡಿಐಜಿ ವೈಭವ್ ಕೃಷ್ಣ ಖಚಿತಪಡಿಸಿದ್ದಾರೆ.