Tuesday, January 27, 2026

ಸತ್ಯ | ನ್ಯಾಯ |ಧರ್ಮ

ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚುವ ಕೆಲಸ ಮಹಾರಾಷ್ಟ್ರ ಸಿಎಂ ಮಾಡಬಾರದು: ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮಹಾರಾಷ್ಟ್ರದ ಗಡಿ ವಿಚಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.  

ಗಡಿ ವಿಚಾರದ ಕುರಿತು ನವೆಂಬರ್‌ 22, ಮಂಗಳವಾರದಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ʼಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ  ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ಕಾರ್ಯಗತ ಮಾಡಲಾಗುವುದುʼ ಎಂದು ಹೇಳಿದ್ದಾರೆ.

ʼಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇರುವಾಗ, ಎಲ್ಲಾ ಭಾಷಿಕರನ್ನು  ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಇರುವ ಕನ್ನಡಿಗರು ಅವರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಅದನ್ನು ನಾವು ಮಾಡುತ್ತೇವೆʼ ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page