ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ತಿಮರೋಡಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಉಡುಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ.
ಬಿ.ಎಲ್ ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡೋ ಮೂಲಕ ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ ಧರ್ಮ, ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡಿದ್ದಾರೆ ಎಂದು ಬಹ್ಮಾವರ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ದೂರು ದಾಖಲಿಸಿದ್ದಾರೆ. ಸುಳ್ಳು ನಿಂದನೆ, ಸಾರ್ವಜನಿಕವಾಗಿ ಶಾಂತಿ ಕದಡುವ ಸೆಕ್ಷನ್‌ನಲ್ಲಿ ಕೇಸ್ ದಾಖಲಾಗಿತ್ತು.