ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ದೂರು ನೀಡಿದ್ದರು.
ಮಹೇಶ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬ್ರಹ್ಮಾವರ ಸಂಚಾರಿ ಪೀಠ ಕೋರ್ಟ್ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಸಂಚಾರಿ ಪೀಠದಿಂದ ಆದೇಶ ನೀಡಲಾಗಿದೆ. ಉಡುಪಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದರು.