ದೆಹಲಿ: ದೆಹಲಿ ಮಹಿಳೆಯನ್ನು ಅಪಹರಿಸಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಖಾಸಗಿ ಭಾಗಗಳಲ್ಲಿ ಕಬ್ಬಿಣದ ರಾಡ್ ತುರುಕಿ ರಸ್ತೆಗೆಸೆದಿರುವ ಕ್ರೂರ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡಿದಿದೆ. ಈ ಹಿನ್ನಲೆಯಲ್ಲಿ ಘಟನೆಗೆ ಸಂಬಂಧಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಐವರು ಪುರುಷರು ಸೇರಿ ದೆಹಲಿಯ 38 ವರ್ಷದ ಮಹಿಳೆಯನ್ನು ಅಪಹರಿಸಿಕೊಂಡು ಹೋಗಿದ್ದು, 2 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಯ ಖಾಸಗಿ ಭಾಗಗಳಲಿ ಕಬ್ಬಿಣದ ರಾಡ್ ಅಳವಡಿಸಲಾಗಿದೆ. ಆನಂತರ ಆಕೆಯನ್ನು ಚೀಲದಲ್ಲಿ ತುಂಬಿ ಮಂಗಳವಾರದಂದು ಮುಂಜಾನೆ ನಂದಗ್ರಾಮದ ಆಶ್ತಮದ ರಸ್ತೆಯಲ್ಲಿ ಎಸೆದಿದ್ದಾರೆ.
ರಸ್ತೆಯಲ್ಲಿ ಮಹಿಳೆಯೊಬ್ಬಳು ಬಿದ್ದಿದ್ದಾರೆ ಎಂಬ ಮಾಹಿತಿ ತಿಳಿದ ಪೊಲೀಸರು ಕೂಡಲೆ ಸ್ಥಳಕ್ಕೆ ಬಂದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು.
ಸಂತ್ರಸ್ಥೆ ಬಳಿ ಘಟನೆಯ ಕುರಿತು ಕೇಳಿದ ಪೊಲೀಸರು , ಸಂಬಂಧಪಟ್ಟ ಐವರಲ್ಲಿ ನಾಲ್ವರನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಚಾರಿಸಿದಾಗ ಆಕೆಯ ಕುಟುಂಬದವರಿಗೆ ಮತ್ತು ಬಂಧಿತರ ನಡುವೆ ಆಸ್ತಿಯ ವಿವಾದವಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದ್ದು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ಅಕ್ಟೋಬರ್ 21 ರೊಳಗೆ ತೆಗೆದುಕೊಂಡ ಕ್ರಮದ ವರದಿಯನ್ನು, ಬಂಧಿತ ಆರೋಪಿಗಳ ವಿವರಗಳೊಂದಿಗೆ ಎಫ್‌ಐಆರ್ ಪ್ರತಿಯನ್ನು ಒದಗಿಸುವಂತೆ ಡಿಸಿಡಬ್ಲ್ಯು ಗಾಜಿಯಾಬಾದ್ ಪೊಲೀಸರಿಗೆ ನೋಟಿಸ್ ನೀಡಿದೆ.