Tuesday, January 27, 2026

ಸತ್ಯ | ನ್ಯಾಯ |ಧರ್ಮ

ಮಹಿಳೆಯನ್ನು ನಿಂದಿಸಿದ ವಿಡಿಯೋ ವೈರಲ್ : ನೋಯ್ಡಾ ರಾಜಕಾರಣಿ ಬಂಧನ

ನವದೆಹಲಿ: ಇತ್ತೀಚಿನ ವೀಡಿಯೊದಲ್ಲಿ, ತ್ಯಾಗಿ ನೋಯ್ಡಾದ ಸೆಕ್ಟರ್ 93 ರ ಗ್ರಾಂಡ್ ಓಮ್ಯಾಕ್ಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ನಿಂದನೆ ಮಾಡುತ್ತಿರುವುದು ಕಂಡುಬಂದಿದೆ. 
ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗುತ್ತಿದಂತೆ ಪರಾರಿಯಾಗಿದ್ದ ನೋಯ್ಡಾ ರಾಜಕಾರಣಿ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಮೀರತ್‌ನಲ್ಲಿ ಬಂಧಿಸಿದ್ದಾರೆ.
ತ್ಯಾಗಿ ಅವರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ್ದರು ಮತ್ತು ಯುಪಿ ಪೊಲೀಸರು ಅವರ ಬಗ್ಗೆ ಮಾಹಿತಿ ನೀಡಿದವರಿಗೆ ₹ 25,000 ಬಹುಮಾನವನ್ನು ಘೋಷಿಸಿದ್ದರು. ಆದರೆ ಇಂದು ಉತ್ತರ ಪ್ರದೇಶದ ಪೊಲೀಸರೆ ತ್ಯಾಗಿಯವರನ್ನು ಬಂಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page