Tuesday, March 3, 2026

ಸತ್ಯ | ನ್ಯಾಯ |ಧರ್ಮ

ಸಂಯಮ ಕಾಪಾಡಿಕೊಳ್ಳಿ: ನೆತನ್ಯಾಹು ಅವರಿಗೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾದ ನಾಯಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಆ ಪ್ರದೇಶದಲ್ಲಿ ಉಂಟಾಗಿರುವ ಭದ್ರತಾ ಪರಿಸ್ಥಿತಿಯ ಕುರಿತು ಅವರು ಚರ್ಚೆ ನಡೆಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿದ ಮೋದಿ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು.

ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನೆತನ್ಯಾಹು ಅವರಲ್ಲಿ ಮೋದಿ ಕೋರಿದರು. ಯುದ್ಧದ ಅಬ್ಬರ ಕಡಿಮೆ ಮಾಡಿ ಸಂಯಮ ಕಾಪಾಡಿಕೊಳ್ಳುವಂತೆ ಸೂಚಿಸಿದ ಅವರು, ಶತ್ರುತ್ವವನ್ನು ಬಿಡಬೇಕು ಎಂದು ಹಿತವಚನ ನೀಡಿದರು.

ಇದೇ ವೇಳೆ, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೂ ಮೋದಿ ಮಾತನಾಡಿದರು. ಗಲ್ಫ್ ರಾಷ್ಟ್ರಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ತೀವ್ರವಾಗಿ ಖಂಡಿಸಿದ ಅವರು, ಈ ಕಷ್ಟದ ಸಮಯದಲ್ಲಿ ಭಾರತವು ಯುಎಇ ಪರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಯುಎಇನಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆಗಾಗಿ ಅಲ್ಲಿನ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಪ್ರಧಾನಿ ಶ್ಲಾಘಿಸಿದರು.

ಪಶ್ಚಿಮ ಏಷ್ಯಾದ ನಾಯಕರೊಂದಿಗೆ ಮಾತನಾಡುವುದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಭದ್ರತಾ ವ್ಯವಹಾರಗಳ ಸಂಪುಟ ಸಮಿತಿಯ (CCS) ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಧ್ಯಪ್ರಾಚ್ಯದಲ್ಲಿ ಕ್ಷೀಣಿಸುತ್ತಿರುವ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.


Related Articles

ಇತ್ತೀಚಿನ ಸುದ್ದಿಗಳು

You cannot copy content of this page