ಬಸ್ತಾರ್: ಛತ್ತೀಸ್‌ಗಢದ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ.
ದಾಂತೇವಾಡ ಮತ್ತು ನಾರಾಯಣಪುರ ಗಡಿಯಲ್ಲಿರುವ ದಕ್ಷಿಣ ಅಬುಜಮದ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮಾವೋವಾದಿಗಳಿಗಾಗಿ ಶೋಧ ನಡೆಸಿದ್ದಾರೆ. ಈ ವೇಳೆ ಪೊಲೀಸರನ್ನು ಎದುರಿಸಿದ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಾವೋವಾದಿಗಳು ಹತರಾಗಿದ್ದಾರೆ. ಗುರುವಾರ ಮುಂಜಾನೆ 3 ಗಂಟೆಯಿಂದ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ಪೊಲೀಸರು ಬಹಿರಂಗಪಡಿಸಿದ್ದಾರೆ. ನಾರಾಯಣಪುರ, ದಾಂತೇವಾಡ, ಜಗದಲ್‌ಪುರ, ಕೊಂಡಗಲ್ ಜಿಲ್ಲೆಯ ಭದ್ರತಾ ಪಡೆಗಳು ಡಿಆರ್‌ಜಿ, ಎಸ್‌ಟಿಎಫ್ ಮತ್ತು ಸಿಆರ್‌ಪಿಎಫ್ ಪಡೆಗಳೊಂದಿಗೆ ಕೂಂಬಿಂಗ್‌ನಲ್ಲಿ ಭಾಗವಹಿಸಿದ್ದವು.