Wednesday, October 29, 2025

ಸತ್ಯ | ನ್ಯಾಯ |ಧರ್ಮ

ಮಲ್ಲಿಕಾರ್ಜುನ್ ಖರ್ಗೆ ಮುಂದಿನ ಮುಖ್ಯಮಂತ್ರಿ – ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜ್ಯದ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಮತ್ತು ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಅವರು ಸ್ಪರ್ಧೆಯಲ್ಲಿರುವ ಯಾವ ನಾಯಕರು ಮುಖ್ಯಮಂತ್ರಿ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರು ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಒಮ್ಮೆ ಸಿಎಂ ಆಗಬೇಕೆಂದು ಕಾಯುತ್ತಿದ್ದಾರೆ. ಸಿಎಂ ಆಗಬೇಕೆಂದು ಅವರಿಗೆ ಆಸೆ ಇದೆ. ಆದರೆ ಸಿಎಂ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದರು. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬಹುದು ಎಂಬ ಬಯದಿಂದ, ಅವರ ಕಡೆಯಿಂದ ಸತೀಶ್‌ ಸಿಎಂ ಆಗಬೇಕೆಂದು ಹೇಳಿಸಿದ್ರು. ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ ಸತೀಶ ಜಾರಕಿಹೊಳಿ ಹೆಸರು ಹೇಳಿಸಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page