ಹಾಸನ: ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಒಬ್ಬ ವ್ಯಕ್ತಿ ಹಠಾತ್ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ.
ಮೃತರನ್ನು ನಗರದ ವಿರೂಪಾಕ್ಷ (59) ಎಂದು ಗುರುತಿಸಲಾಗಿದೆ. ಅವರು ಪ್ರಿಂಟಿಂಗ್ ಪ್ರೆಸ್ ಮಾಲೀಕರಾಗಿದ್ದು, ರವಿ ಎಂಬ ಹೆಸರಿನಿಂದಲೂ ಪರಿಚಿತರಾಗಿದ್ದರು.
ಪ್ರಾಥಮಿಕ ಮಾಹಿತಿಯ ಪ್ರಕಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾದರೆಂದು ಶಂಕಿಸಲಾಗಿದೆ. ಈ ಘಟನೆ ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.