ಲಕ್ನೋ: ಉತ್ತರ ಪ್ರದೇಶದ ಕೌಶಂಬಿಯಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ 27 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗ ನ್ಯಾಯಾಲಯ ಶುಕ್ರವಾರ ಶಿಕ್ಷೆ ಪ್ರಕಟಿಸಿದೆ. 10 ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ವಕೀಲರು ತಿಳಿಸಿದ್ದಾರೆ.
ವಿಶೇಷ ನ್ಯಾಯಾಧೀಶ (ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ) ಶಿರಿನ್ ಜೈದಿ ಅವಧೇಶ್ ಶುಕ್ಲಾ ಎಂಬಾತನ ಮೇಲೆ ಮಾರ್ಚ್ 11, 1997 ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ಪೊಲೀಸ್ ದೂರು ದಾಖಲಿಸಿದ್ದರು, ಶುಕ್ಲಾ ತನ್ನನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಆ ಮಹಿಳೆ ದೂರು ನೀಡಿದ್ದಳು. ಆ ದೂರಿನ ವಿಚಾರಣೆ ನಡೆಸಿದ ಕೋರ್ಟ್ ಈಗ ತೀರ್ಪು ನೀಡಿದೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಪಂಕಜ್ ಸೋಂಕರ್ ತಿಳಿಸಿದ್ದಾರೆ.
ಐಪಿಸಿಯ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸೈನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.