Saturday, December 27, 2025

ಸತ್ಯ | ನ್ಯಾಯ |ಧರ್ಮ

ಹೊಸ ವರ್ಷಾಚರಣೆ ಸಂಭ್ರಮ : ಕೊಡಗು ಪ್ರವಾಸಿ ವಸತಿ ಗೃಹಗಳು ಹಾಗೂ ಹೋಮ್‌ಸ್ಟೇಗಳಿಗೆ ಕಡ್ಡಾಯ ಮಾರ್ಗಸೂಚಿ – ಪ್ರವಾಸೋದ್ಯಮ ಇಲಾಖೆ

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಕಾನೂನು ಪಾಲನೆ ಹಾಗೂ ಸಾರ್ವಜನಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರವಾಸಿ ವಸತಿ ಗೃಹಗಳು, ಹೋಮ್‌ಸ್ಟೇಗಳು ಮತ್ತು ಲಾಡ್ಜ್‌ಗಳಿಗೆ ಕೆಳಕಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.
* ಅತಿಥಿಗಳು ಆಗಮಿಸಿದ ವೇಳೆ ಅವರ ಪೂರ್ಣ ಹೆಸರು, ಆಧಾರ್ ಸಂಖ್ಯೆ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆಗಳನ್ನು ರಿಜಿಸ್ಟರ್ ಪುಸ್ತಕದಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
* ವಿದೇಶಿ ಪ್ರವಾಸಿಗರ ವೀಸಾ, ಪಾಸ್‌ಪೋರ್ಟ್ ಹಾಗೂ ವಿಮಾನ ಟಿಕೆಟ್ ಪರಿಶೀಲಿಸಿ ವಿವರಗಳನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು.
ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ, ಮಾರ್ಗ ನಕ್ಷೆ ಹಾಗೂ ತಾಣಗಳು ತೆರೆಯುವ–ಮುಚ್ಚುವ ಸಮಯದ ವಿವರಗಳನ್ನು ತಿಳಿಸಬೇಕು.
* ವಸತಿ ಗೃಹದ ಮಾಲೀಕರು ಅದೇ ಕಟ್ಟಡದಲ್ಲಿ ವಾಸವಿರಬೇಕು. ಪ್ರವಾಸಿಗರೊಂದಿಗೆ ಅವರ ಪ್ರವಾಸ ಯೋಜನೆ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು.
* ಸ್ಥಳೀಯ ಸಂಪ್ರದಾಯಗಳು, ಪದ್ಧತಿಗಳು ಹಾಗೂ ಕಾನೂನುಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡಬೇಕು.
* ಹೊರವಲಯಗಳು ಹಾಗೂ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು.
* ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.
* ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಕನಿಷ್ಠ 45 ದಿನಗಳ ಫೂಟೇಜ್ ಸಂಗ್ರಹಿಸಿಟ್ಟುಕೊಳ್ಳಬೇಕು. ಸಿಸಿಟಿವಿ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಬೇಕು.
* “ನೀವು ಸಿಸಿಟಿವಿ ಕಣ್ಗಾವಲಿನಲ್ಲಿದ್ದೀರಿ” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು.
* ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಸಂಶಯಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣವೇ ಸರ್ಕಾರದ ಗಮನಕ್ಕೆ ತರಬೇಕು. ವಿಫಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
* ಮಾದಕ ವಸ್ತುಗಳು, ಮದ್ಯಪಾನ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು.
* ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಕಡ್ಡಾಯವಾಗಿ ಇಡಬೇಕು.
* ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳಿಗೆ ನಿಷೇಧ ಇರುವುದರಿಂದ ಅದರಂತೆ ಕ್ರಮ ವಹಿಸಬೇಕು.
* ಯಾವುದೇ ಪ್ರವಾಸಿಗರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಬಾರದು.

* ತುರ್ತು ಸಂಪರ್ಕ ಸಂಖ್ಯೆ
ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ: 08272-221077 / 08272-221099
ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ: 9480804900 / 08272-228330
ಈ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page