Sunday, June 23, 2024

ಸತ್ಯ | ನ್ಯಾಯ |ಧರ್ಮ

ಕಾವೇರಿ ಕಿಚ್ಚು: ಮಂಡ್ಯದೆಲ್ಲೆಡೆ ರೈತ ಹೋರಾಟದ ಕಾವು

ಮಂಡ್ಯ: ತಮಿಳುನಾಡಿಗೆ ದಿನವೂ 5,000 ಕ್ಯೂಸೆಕ್ಸ್‌ ನೀರುವ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದ ರೈತರು ಮತ್ತು ಕನ್ನಡಪರ ಸಂಘಟನೆಗಳು ಬೀದಿಗಿಳಿದಿದ್ದು ನೀರು ಬಿಡುವುದರ ವಿರುದ್ಧದ ಹೋರಾಟ ಕಾವೇರುತ್ತಿದೆ.

ಮಂಡ್ಯದ ಸಂಜಯ್‌ ವೃತ್ತದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ವಿನೂತನ ಹೋರಾಟವನ್ನು ಹಮ್ಮಿಕೊಂಡಿದ್ದು, ಅವರು ಭಿಕ್ಷೆ ಪಾತ್ರೆ ಹಿಡಿದು ಹರಕಲು ಅಂಗಿ, ಪಟಾಪಟ್ಟಿ ಚಡ್ಡಿ ಧರಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಜನರು ಭಿಕ್ಷೆ ಎತ್ತಬೇಕಾಗುತ್ತೆ. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ ಬೀದಿಗೆ ನಿಲ್ಲಿಸಿದೆ ಎಂದು ಹೊರಾಟಗಾರರು ಕಿಡಿ ಕಾರಿದ್ದಾರೆ.

ಅಲ್ಲದೆ ಇದೇ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಕಣಿಮಿಣಿಕಿ ಟೋಲ್‌ ಪ್ಲಾಜಾ ಬಳಿ ಬೃಹತ್‌ ಪ್ರತಿಭಟನೆ ನಡೆಯುತ್ತಿದ್ದು, ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ನೀರು ಬಿಡುಗಡೆ ಕುರಿತು ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಟೋಲ್‌ ಬಳಿ ಪ್ರತಿಭಟನೆ ಆರಂಭವಾಗಲಿದೆ ಎಂದು ಸಂಘಟಕರು ಹೇಳಿದ್ದಾರೆ. ದಶಪಥ ಹೆದ್ದಾರಿ ತಡೆದು ಹೋರಾಟ ನಡೆಸಲು ಸಿದ್ಧತೆ ನಡೆಯುತ್ತಿದೆ.

ಈ ಕುರಿತು ಮಾತನಾಡಿರುವ ರೈತ ನಾಯಕ ಬಡಗಲಪುರ ನಾಗೇಂದ್ರ, ರಾಜ್ಯ ಸರ್ಕಾರ CWRC ನಿರ್ಧಾರ ಒಪ್ಪಬಾರದು, ಕಾವೇರಿ ನಿರ್ವಹಣಾ ಸಮಿತಿ ಸೂಚನೆ ಸರಿಯಿಲ್ಲ ಎಂದಿದ್ದಾರೆ. CWRC ನಿರ್ಧಾರ ಅವಾಸ್ತವವಾಗಿದ್ದು, ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ರೈತರ ಹಿತ ಕಾಪಾಡದೇ ಇದ್ದರೆ. ರೈತರು ಬೀದಿಗಿಳಿದು ಹೋರಾಟ ಮಾಡ್ಬೇಕಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಹೇಳಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ, ದೆಹಲಿಯಿಂದ ಮರಳಿದ ನಂತರ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು