Friday, June 14, 2024

ಸತ್ಯ | ನ್ಯಾಯ |ಧರ್ಮ

ಮನೆಯ ಮೇಲೆ ಗುಂಪೊಂದರ ದಾಳಿ!

ದೆಹಲಿ:  ವಜೀರಾಬಾದ್‌ನಲ್ಲಿ ಗುಂಪೊಂದು ನಡೆಸಿದ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದು, ಶಸ್ತ್ರಾಸ್ತ್ರ ಕಾಯಿದೆ ಮತ್ತು ಐಪಿಸಿಯ ಸಂಬಂಧಿತ ವಿಭಾಗದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಗುಂಪೊಂದು ಮನೆಯೊಂದರ ಮೇಲೆ ದಾಳಿ ಮಾಡಿ ಹೊರಗೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ. ಗುಂಪಿನಲ್ಲಿದ್ದ ಕೆಲವರು ಗುಂಡು ಹಾರಿಸಿದ್ದು ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸುವಂತೆ ವಜೀರಾಬಾದ್‌ನ ಕಾಲೋನಿ ನಿವಾಸಿ ರಮೇಶ್ ತ್ಯಾಗಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಗುಂಪು ದಾಳಿ ನಡೆಸಿದ ದೃಶ್ಯವು ಸಿಸಿ ಟಿವಿಯಲ್ಲಿ ಸೇರೆಯಾಗಿದ್ದು, 7 ಜನರನ್ನು ಪೊಲೀಸರು ಗುರುತಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

Related Articles

ಇತ್ತೀಚಿನ ಸುದ್ದಿಗಳು