Wednesday, June 19, 2024

ಸತ್ಯ | ನ್ಯಾಯ |ಧರ್ಮ

ಮನೆಯಲ್ಲಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

ಫುಲ್ಬಾನಿ: ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತಮ್ಮ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ತಿರುಪತಿ ರಾವ್ ಪಟ್ನಾಯಕ್, ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಸ್ವಾಗತಿಕಾ ಬೆಹೆರಾ (30) ಬೆಳಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಹೇಳಿದರು ಎಂದು ತಿಳಿಸಿದ್ದಾರೆ.

ಸ್ವಾಗತಿಕಾ ಬೆಹೆರಾ ಇಂತಹ ಹೆಜ್ಜೆ ಇಡಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ತನಿಖೆ ನಡೆಯುತ್ತಿದೆ ಎಂದು ಎಸ್‌ಡಿಪಿಒ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು