ಮಂಗಳೂರು: ಸುರತ್ಕಲ್ ಟೋಲ್ ಗೇಟ್ನಲ್ಲಿ ಡಿಸೆಂಬರ್ 1 ರಿಂದ ಟೋಲ್ ಸಂಗ್ರಹ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ದಾರೆ.
ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಬಳಿಯ ಟೋಲ್ ಗೇಟ್ನಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಯೋಜನಾ ನಿರ್ದೇಶಕರು ನೀಡಿದ ಪತ್ರದ ಆಧಾರದ ಮೇಲೆ, ಟೋಲ್ ಸಂಗ್ರಹವನ್ನು ನಿಲ್ಲಿಸಲಾಗುವುದು ಎಂದು ರವಿಕುಮಾರ್ ಹೇಳಿದ್ದಾರೆ.
ನವೆಂಬರ್ 30 ರ ಮಧ್ಯರಾತ್ರಿಯಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಡಿಸಿ ರವಿಕುಮಾರ್ ತಮ್ಮ ಆದೇಶಿಸಿದ್ದು, ಸಾರ್ವಜನಿಕರು ಯಾವುದೇ ಟೋಲ್ ಪಾವತಿಸದೆ ಟೋಲ್ ಗೇಟ್ ಅನ್ನು ದಾಟಬಹುದು ಎಂದು ಸಹ ತಿಳಿಸಿದ್ದಾರೆ.