Home ರಾಜ್ಯ ಕಲ್ಬುರ್ಗಿ ಪ್ರಿಯಾಂಕ್ ಖರ್ಗೆ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದ ಬಿಜೆಪಿ ನಾಯಕನ ಬಂಧನ

ಪ್ರಿಯಾಂಕ್ ಖರ್ಗೆ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದ ಬಿಜೆಪಿ ನಾಯಕನ ಬಂಧನ

0

ಬೆಂಗಳೂರು: ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಎನ್ನುವನನ್ನು ಕಲಬುರಗಿ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಣಿಕಾಂತ್ ರಾಥೋಡ್ ವಿರುದ್ಧ ಕಲಬುರಗಿಯ ಮಡಬೂಳ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 (ಎ) ಮತ್ತು ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ವಿರುದ್ಧವಾಗಿ ಅಪರಾಧ ಮಾಡಲು ಪ್ರೇರೇಪಿಸಿದಕ್ಕಾಗಿ 505 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಥೋಡ್ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಚಿತ್ತಾಪುರ ಕ್ಷೇತ್ರದಲ್ಲಿ ಸೋಲು ಕಂಡಿದ್ದ.

ಪೊಲೀಸರು ಖರ್ಗೆಯವರ ಕೈಗೊಂಬೆಯಾಗಿದ್ದಾರೆ, ಆತ್ಮಹತ್ಯೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದನು.

ಕುಲಗರ್ತಿ ಗ್ರಾಮದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದು ಒಂದು ತಿಂಗಳಾದರೂ ಪೊಲೀಸರು ಆರೋಪಿಗಳು ಪ್ರಿಯಾಂಕ್ ಖರ್ಗೆ ಬೆಂಬಲಿಗರಾಗಿರುವುದರಿಂದ ಅವರನ್ನು ಬಂಧಿಸುತ್ತಿಲ್ಲ ಎಂದು ರಾಥೋಡ್ ತನ್ನ ಪೋಸ್ಟ್‌ನಲ್ಲಿ ಆರೋಪಿಸಿದ್ದ.

ಸುಳ್ಳು ಪ್ರಚಾರ ಮಾಡಿದ ಆರೋಪದ ಮೇಲೆ ಪೊಲೀಸರು ಮಣಿಕಾಂತ್ ರಾಥೋಡನನ್ನು ಬುಧವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಬಂಧನವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು.

ಕುಲಗರ್ತಿ ಗ್ರಾಮದಲ್ಲಿ ಯುವಕನೊಬ್ಬನ ಸಾವಿಗೆ ಪ್ರಿಯಾಂಕ್ ಖರ್ಗೆ ಅವರ ಅನುಯಾಯಿಗಳೇ ಕಾರಣವಾಗಿದ್ದು, ಪೊಲೀಸರು ಅವರನ್ನು ಸುಮ್ಮನೆ ಬಿಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಥೋಡ್‌ನನ್ನು ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿದೆ.

ರಾಥೋಡ್ ಬಂಧನದ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಲು ಸಿದ್ಧತೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ತನ್ನ ಮನೆಗೆ ಪ್ರವೇಶಿಸುವ ಮೊದಲು, ಮಣಿಕಂಠ ರಾಥೋಡ್, ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ತನ್ನ ಹೋರಾಟವನ್ನು ಬದಿಗೊತ್ತಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವಿಡಿಯೋ ಮಾಡಿ ಹೇಳಿಕೆ ನೀಡಿದ್ದ.

“ನಾನು ಖಚಿತವಾಗಿ ಬಂಧಿಸಲ್ಪಡುತ್ತೇನೆ. ಆದರೆ, ಜೈಲಿನಿಂದ ಹೊರಬಂದ ನಂತರ, ಈ ವಿಷಯದ ಬಗ್ಗೆ ನಾನು ಬೃಹತ್ ಪ್ರತಿಭಟನೆಯನ್ನು ಆಯೋಜಿಸುತ್ತೇನೆ” ಎಂದು ವಿಡೀಯೋದಲ್ಲಿ ಹೇಳಿದ್ದಾನೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಹುಟ್ಟೂರಿನವನಾದ ರಾಥೋಡ್ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿಯ ಮುಖವಾಗಿ ಗುರುತಿಸಿಕೊಂಡಿದ್ದಾನೆ.

You cannot copy content of this page

Exit mobile version