ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಶನಿವಾರ ಬೆಳಗ್ಗೆ ಆದೇಶ ಪ್ರಕಟಿಸಿದೆ.ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಅಬ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆಯ ಭಾಗವಾಗಿ ಚೌಹಾನ್ ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ, ಉದ್ಯಮಿಗಳು ಸೇರಿದಂತೆ ಹಲವರನ್ನು ಬಂಧಿಸಿರುವುದನ್ನು ಇಲ್ಲಿ ಸ್ಮಹರಿಸಬಹುದು.