ಸೋನಿಯಾ ಗಾಂಧಿಯವರನ್ನು ಭೇಟಿಯಾದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದಿದ್ದ ಶೂಟರ್ ಮನು ಭಾಕರ್ ಭಾರತಕ್ಕೆ ಆಗಮಿಸಿದ್ದಾರೆ. ಯುವ ಶೂಟರ್ ದೆಹಲಿಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತಲುಪಿ ಅವರನ್ನು ಭೇಟಿಯಾದರು.

ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಮನು ಭಾಕರ್ ಅವರನ್ನು ಅಭಿನಂದಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ಎರಡು ಕಂಚಿನ ಪದಕ ಗೆದ್ದಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ, ಹಾಗೂ ಸರಬ್ ಜೋತ್ ಸಿಂಗ್ ಅವರೊಂದಿಗೆ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದಿದ್ದ ಮನು ಭಾಕರ್, ಮಹಿಳೆಯರ 25 ಮೀಟರ್ ಸ್ಪರ್ಧೆಯಲ್ಲಿ ಸ್ವಲ್ಪದರಲ್ಲೇ ಪದಕ ವಂಚಿತರಾದರು.

ಇಂದು ಅವರು ಪ್ಯಾರಿಸ್ ನಿಂದ ನೇರವಾಗಿ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ. ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

Related Articles

ಇತ್ತೀಚಿನ ಸುದ್ದಿಗಳು