ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BREAKING NEWS : ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜಕೀಯ, ರಾಜ್ಯ

• 1 ನಿಮಿಷದ ಓದು

BREAKING NEWS : ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

ಹುಬ್ಬಳ್ಳಿ : ಇಂದಿನ ರಾಜಕೀಯ, ಸದನದಲ್ಲಿನ ಬೆಳವಣಿಗೆಗಳಿಂದ ಮನಸ್ಸಿಗೆ ತೀವ್ರ ನೋವು ಆಗುತ್ತಿದೆ ಎಂದು ಇಂದಷ್ಟೇ ಹೇಳುವ ಮೂಲಕ ರಾಜೀನಾಮೆಯ ಸುಳಿವು ನೀಡಿದ್ದ ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೀಗ ದಿಢೀರ್​​​ ಬೆಳವಣಿಗೆ ಎಂಬಂತೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿಯ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದು ಸರಿಯಲ್ಲ ಎಂದಿದ್ದರು. ಇನ್ನು ಬಿಜೆಪಿಯ 18 ಶಾಸಕರ ಅಮಾನತ್ತನ್ನೂ ಪ್ರಸ್ತಾಪಿಸಿದ ಅವರು, ಯಾವ ರಾಜಕಾರಣಿಗಳು ಸದನ ಹಾಗೂ ಸಭಾಧ್ಯಕ್ಷರನ್ನು ಗೌರವಿಸುತ್ತಿಲ್ಲ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಹೊರಟ್ಟಿ ಅವರು ರಾಜೀನಾಮೆಯನ್ನು ಸ್ವೀಕರಿಸಿ ಎಂದು ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ  ಪತ್ರ ಬರೆದಿದ್ದಾರೆನ್ನಲಾದ ಪತ್ರವೊಂದು ಹರಿದಾಡುತ್ತಿದೆ. ವೈಯಕ್ತಿಕ ಕಾರಣದಿಂದ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದಿರುವ ಅವರು, ರಾಜೀನಾಮೆಯನ್ನು ಇದೇ ಮಾ. 31ರೊಳಗೆ ಸ್ವೀಕರಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಇಂದಿನ ರಾಜಕೀಯ ನೋಡಿದರೆ ತಾವು ತಮ್ಮ ಸ್ಥಾನದಲ್ಲಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ಇತ್ತೀಚೆಗೆ ರಾಜಕಾರಣಿಗಳನ್ನು ನಿಭಾಯಿಸುವುದು ಕಷ್ಟ ಎಂದು ಭಾವುಕ ಮಾತನ್ನು ಹೊರಟ್ಟಿ ಅವರು ಆಡಿದ್ದಾರೆ.

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು