ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಭಾಷೆಯನ್ನು ಕಡ್ಡಾಯಗೊಳಿಸಲು ಅದು ನಿರ್ಧಸಿದೆ.
ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದೆ. ಮಹಾರಾಷ್ಟ್ರ ಸರ್ಕಾರ ಸೋಮವಾರ ಇದನ್ನು ಘೋಷಿಸಿತು. ಅಧಿಸೂಚನೆಯ ಪ್ರಕಾರ, ಇತರ ರಾಜ್ಯಗಳಿಂದ ಬರುವವರು ಮಾತ್ರ ಇತರ ಭಾಷೆಗಳನ್ನು ಮಾತನಾಡಬೇಕು. ಮರಾಠಿ ಜನರು ಮರಾಠಿ ಮಾತ್ರ ಮಾತನಾಡಬೇಕೆಂದು ಅದು ಹೇಳುತ್ತದೆ.
ಯಾವುದೇ ಸರ್ಕಾರಿ ಅಧಿಕಾರಿ ಈ ನಿಯಮವನ್ನು ಉಲ್ಲಂಘಿಸಿದರೆ, ಅಗತ್ಯ ಕ್ರಮಕ್ಕಾಗಿ ಕಚೇರಿ ಅಥವಾ ಇಲಾಖೆಯ ಉಸ್ತುವಾರಿ ಅಧಿಕಾರಿಗಳಿಗೆ ಔಪಚಾರಿಕ ದೂರು ನೀಡಬಹುದು ಎಂದು ಅದು ಹೇಳಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ತೆಗೆದುಕೊಂಡ ಕ್ರಮದಿಂದ ದೂರುದಾರರು ತೃಪ್ತರಾಗದಿದ್ದರೆ, ಮಹಾರಾಷ್ಟ್ರ ವಿಧಾನಸಭೆಯ ಮರಾಠಿ ಭಾಷಾ ಸಮಿತಿಯ ಮುಂದೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಲಾಗಿದೆ.