Wednesday, March 26, 2025

ಸತ್ಯ | ನ್ಯಾಯ |ಧರ್ಮ

BIG NEWS : ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ಕೊನೆಯ ದಿನ

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಹಲವು ಬಾರಿ ಗಡುವು ವಿಸ್ತರಣೆ ಮಾಡಿದ ನಂತರ ಈಗ ಕಟ್ಟ ಕೊನೆಯ ಬಾರಿಗೆ ಕೊನೆಯ ದಿನಾಂಕ ಸಿಕ್ಕಿದೆ. ಇದೀಗ ಮಾರ್ಚ್ 31 ರ ಒಳಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಸದೇ ಇದ್ದರೆ ಬಾರಿ ಮೊತ್ತದ ದಂಡ ಬೀಳಲಿದೆ.

ಈ ಹಿಂದೆ ಮತ್ತೆ ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಈ ಎಚ್ಚರಿಕೆ ನಂತರವೂ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ದಂಡದ ಜೊತೆಗೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಇಲಾಖೆ ಮಾಡಿ ಕೊಡುವುದಿಲ್ಲ ಎಂದು ತಿಳಿಸಿದೆ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page