ಕಾರ್ಖಾನೆಯಲ್ಲಿ ಅಗ್ನಿ ಅವಘಡ – ಆರು ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿರುದುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ ಸಿಡಿತದಿಂದ ಕಾರ್ಮಿಕರು ಚೆಲ್ಲಾಪಿಲ್ಲಿಯಾದರು. ಕಾರ್ಖಾನೆಯ ಸಮೀಪದ ಆರು ಮನೆಗಳು ನಾಶವಾಗಿವೆ. ಭಾರೀ ಶಬ್ದದೊಂದಿಗೆ ಸ್ಫೋಟ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ಜನರು ಸ್ಥಳದಿಂದ ಓಡಿ ಬಂದರು.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಪಘಾತಕ್ಕೆ ಕಾರಣಗಳು ತಿಳಿಯಬೇಕಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು