Friday, August 16, 2024

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ : ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ

ಸಕಲೇಶಪುರ : ಮಂಗಳೂರು-ಹಾಸನ ಮಾರ್ಗದ ಸಕಲೇಶಪುರ ತಾಲೂಕು ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮೇಲೆ ಶುಕ್ರವಾರ ರಾತ್ರಿ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ರೈಲು ಪ್ರಯಾಣ ಸ್ಥಗಿತಗೊಂಡಿದ್ದು ಸಾವಿರಾರು ಪ್ರಯಾಣಿಕರು ಮಾರ್ಗಮಧ್ಯದಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಹಾಸನ-ಮಂಗಳೂರು ಮಾರ್ಗದ ಕಿಲೋಮೀಟರ್ 42/43 ರ ಮಧ್ಯೆ ಭೂಕುಸಿತಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.

ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣ ಆರಂಭಿಸಿದ್ದ ಆರು ರೈಲುಗಳನ್ನು ಸಕಲೇಶಪುರ, ಯಡಕುಮರಿ, ಶಿರವಾಗಿಲು, ಆಲೂರು ಸೇರಿ ಆರು ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ.

ದಿಢೀ‌ರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ರೈಲಿನಲ್ಲಿ ಕುಳಿತಿರುವ ಸಾವಿರಾರು ಪ್ರಯಾಣಿಕರು ಮಧ್ಯರಾತ್ರಿಯಿಂದ ಪ್ರಯಾಣದ ಅನಿಶ್ಚಿತತೆಗೆ ಸಿಲುಕಿ ಪರದಾಡುತ್ತಿದ್ದಾರೆ. ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಅವರು ಒತ್ತಾಯಿಸುತ್ತಿದ್ದಾರೆ.

ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page