Sunday, June 22, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕದ 60 ಸ್ಥಳಗಳಲ್ಲಿ ಬೃಹತ್ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಾಯುಕ್ತ ಬುಧವಾರ ಬೆಳಗ್ಗೆ ಕರ್ನಾಟಕದಾದ್ಯಂತ 13 ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ವ್ಯಾಪಕ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು, ಬೀದರ್, ರಾಮನಗರ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ 60 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಲೋಕಾಯುಕ್ತ ದಳಗಳು ಏಕಕಾಲದಲ್ಲಿ ದಾಳಿ ನಡೆಸುತ್ತಿವೆ. ಬೆಂಗಳೂರಿನಲ್ಲಿ ಐದು ಕಡೆ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

13 ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು 12 ಉಪ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಜನವರಿಯಲ್ಲಿ ಕರ್ನಾಟಕದಲ್ಲಿ ಲೋಕಾಯುಕ್ತರು 40 ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿತ್ತು. 10 ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿತ್ತು. ತುಮಕೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಹಾಸನ, ಚಾಮರಾಜನಗರ, ಮಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page