ಹಾಸನ : ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಜೂಜಾಟವಾಡಿಸುತ್ತಿದ್ದ 17 ಜನ ಆರೋಪಿಗಳನ್ನು ಬಂಧಿಸಿ 65,140 ರೂ. ನಗದು ಹಣ, 20 ಮೊಬೈಲ್, 2 ಸ್ಕೂಟಿ ಹಾಗು 2 ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ಮಾರ್ಗದರ್ಶನದಲ್ಲಿ, ಹಾಸನ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಗಂಗಾಧರಪ್ಪ ಅವರ ನೇತೃತ್ವದಲ್ಲಿ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸ್ವಾಮಿನಾಥ, ಹಾಸನ ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಕೇಶವಪ್ರಸಾದ್, ಪ್ರಿಯಾಂಕ, ಪೊಲೀಸ್ ಶಾಂತಿಗ್ರಾಮ ಠಾಣೆ ಸಬ್ ಇನ್ಸ್‌ಪೆಕ್ಟರ್ ಅರುಣ್, ಮಂಜುನಾಥ, ಅಂತಿಮ, ಹಾಗು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು ಆರು ಪ್ರರಕಣದಲ್ಲಿ 17 ಜನ ಆರೋಪಿಗಳನ್ನು ಬಂಧಿಸಿದ್ದು 65,140 ನಗದು ಹಣ, 20 ಮೊಬೈಲ್, 2 ಸ್ಕೂಟಿ ಹಾಗೂ 2 ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.
