Home ರಾಜ್ಯ ಚಿಕ್ಕಮಗಳೂರು ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಪ್ರತಿಭಟನೆ, ಬಂದ್ ಯಶಸ್ವಿ ; ಇನ್ನೂ...

ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಪ್ರತಿಭಟನೆ, ಬಂದ್ ಯಶಸ್ವಿ ; ಇನ್ನೂ ಪರಿಣಾಮಕಾರಿ ಹೋರಾಟದ ಎಚ್ಚರಿಕೆ

0

ಅರಣ್ಯ ಕಾಯ್ದೆ ಹೆಸರಿನಲ್ಲಿ ರೈತರ ಒತ್ತುವರಿ ಸಾಗುವಳಿ ಭೂಮಿಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಕೈಗೊಂಡಿರುವ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಶೃಂಗೇರಿ ಕ್ಷೇತ್ರದಾದ್ಯಂತ ಕರೆ ನೀಡಿದ್ದ ಬಂದ್ ಯಶಸ್ವಿಯಾಗಿ ನೆರವೇರಿತು.

ಅರಣ್ಯ ಕಾಯ್ದೆ ಹೆಸರಿನಲ್ಲಿ ರೈತರ ಮತ್ತು ನಾಗರಿಕರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಮತ್ತು ಒತ್ತುವರಿ ತೆರವುಗೊಳಿಸುವುದನ್ನು ವಿರೋಧಿಸಿ ‘ಮಲೆನಾಡು ನಾಗರಿಕರ, ರೈತರ ಹಿತರಕ್ಷಣಾ ಸಮಿತಿ’ ಕರೆ ಕೊಟ್ಟಿದ್ದ ಪ್ರತಿಭಟನೆ ಮತ್ತು ಬಂದ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ನಾಗರಿಕರು, ಮಹಿಳೆಯರು, ಆದಿವಾಸಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಸೇರಿ ಬಂದ್ ಯಶಸ್ವಿಗೊಳಿಸಿದರು.

ಬಂದ್ ಗೆ ಶೃಂಗೇರಿ ಕ್ಷೇತ್ರದ ಮೂರೂ ತಾಲ್ಲೂಕುಗಳಾದ ಶೃಂಗೇರಿ, ಕೊಪ್ಪ ಹಾಗೂ ನರಸಿಂಹರಾಜಪುರ ತಾಲ್ಲೂಕಿನ ಹೆಚ್ಚಿನ ರೈತರು ಪಾಲ್ಗೊಂಡು, ಅರಣ್ಯ ಇಲಾಖೆಯ ದೌರ್ಜನ್ಯ ಖಂಡಿಸಿದರು. ಅಷ್ಟೇ ಅಲ್ಲದೇ ಮಲೆನಾಡು ಭಾಗದ ಒತ್ತುವರಿ ತೆರವನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ, ಹಾಗೊಮ್ಮೆ ಅರಣ್ಯ ಇಲಾಖೆ ತಮ್ಮ ಧೋರಣೆ ಮುಂದುವರೆಸಿದ್ದೇ ಆದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರವಾಗಿ ಮತ್ತೂ ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂಬ ಎಚ್ಚರಿಕೆ ನೀಡಿದರು.

ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆಸ್ಪತ್ರೆ, ಮೆಡಿಕಲ್ ಶಾಪುಗಳನ್ನು ಹೊರತುಪಡಿಸಿ, ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಅಂಗಡಿಗಳ ಮಾಲಿಕರು ಬಂದ್ ಗೆ ಸಹಕರಿಸಿದ್ದರು.

ರೈತರು ಸಾಗುವಳಿ ಮಾಡುತ್ತಿರುವ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ತೆರವುಗೊಳಿಸುವುದರ ವಿರುದ್ಧ ಮತ್ತು ದೌರ್ಜನ್ಯದ ವಿರುದ್ಧ ರೈತರು ಬೃಹತ್ ಸಂಖ್ಯೆಯಲ್ಲಿ ಇಂದು ಶೃಂಗೇರಿ ಕ್ಷೇತ್ರದಲ್ಲಿ ಬಂದ್ ಆಚರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಇದು ಹೀಗೆ ಮುಂದುವರಿದರೆ.. ಮುಂದಿನ ದಿನಗಳಲ್ಲಿ ದೆಹಲಿ, ಪಂಜಾಬ್, ಕೇರಳದ ರೈತರ ಮಾದರಿಯಲ್ಲಿ ಹೋರಾಟವನ್ನು ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

You cannot copy content of this page

Exit mobile version