Home ಬ್ರೇಕಿಂಗ್ ಸುದ್ದಿ ಹಾಸನ : RSS ವಿರುದ್ಧ ದಲಿತ-ಪ್ರಗತಿಪರ ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ

ಹಾಸನ : RSS ವಿರುದ್ಧ ದಲಿತ-ಪ್ರಗತಿಪರ ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ

0

ಹಾಸನ : ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಹಾಸನ ಜಿಲ್ಲೆಯ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಒಟ್ಟಾಗಿ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಬಳಿಕ ನಗರ ಕೇಂದ್ರ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಂಚರಿಸಿ ಅಂಬೇಡ್ಕರ್ ಭವನದವರೆಗೆ ಸಾಗಿದರು.

ಪ್ರತಿಭಟನೆ ವೇಳೆ ಮಾತನಾಡಿದ ದಲಿತ ಮುಖಂಡ ಕೃಷ್ಣದಾಸ್ ಅವರು, ಸಮಾಜದಲ್ಲಿ ಹೆಚ್ಚುತ್ತಿರುವ ದೌರ್ಜನ್ಯ, ವೈಷಮ್ಯ ಮತ್ತು ಸಂವಿಧಾನ ಮೌಲ್ಯಗಳ ಮೇಲಿನ ದಾಳಿಗಳನ್ನು ಖಂಡಿಸಿದರು. ಇತ್ತೀಚಿನ ಘಟನೆಗಳು ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದಕ್ಕೆ ಸಾಕ್ಷಿ ಎಂದರು. ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ಅನ್ಯಾಯ, ಕೋಮು ತಣತೆಗಳನ್ನು ಹೆಚ್ಚಿಸುವ ಪ್ರವೃತ್ತಿಗಳು ಹಾಗೂ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಸಂಘಟಿತ ಚಟುವಟಿಕೆಗಳನ್ನು ನಿಗ್ರಹಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುಪ್ರಿಂ ಕೋರ್ಟಿನ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಪ್ರಕರಣ, ಪ್ರಿಯಾಂಕ ಖರ್ಗೆ ಅವರಿಗೆ ಮಾಡಿದ ಅವಮಾನ, ಇದೆ ರೀತಿ ಅನೇಕ ಅವಮಾನ ರೀತಿ ಸುಳ್ಳು ಸುದ್ಧಿ ಹಬ್ಬಿಸಿರುವ ಆರ್.ಎಸ್.ಎಸ್. ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ದಲಿತರ ಜಾತಿ ಮೇಲೆ ಹೆಚ್ಚಾಗುತ್ತಿರುವ ದೌರ್ಜನ್ಯ, ವೈಷಮ್ಯ, ಅಸಹಿಷ್ಣುತೆ ಮತ್ತು ಸಂವಿಧಾನ ಮೌಲ್ಯಗಳ ಮೇಲಿನ ದಾಳಿ ಖಂಡಿಸಿ, ಸಮಾಜದಲ್ಲಿ ಶಾಂತಿ ಸಾಮರಸ್ಯ ಕದಡಿ, ಕೋಮುದಳ್ಳುರಿಗೆ ಪ್ರದೋಚನೆ ನೀಡುತ್ತಿರುವ ಎಸ್‌ಎಸ್ ಹಾಗೂ ಇತರೆ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನಗರದಲ್ಲಿಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.ಡಿಸಿ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ನಡೆದ ಮೆರವಣಿಗೆಯಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನಾಯಕರು ಮತ್ತು ನೂರಾರು ಜನಗಳು ಭಾಗವಹಿಸಿದರು.ಈ ಸಂದರ್ಭದಲ್ಲಿ ಎಂ. ಸೋಮಶೇಖರ್, ಹೆಚ್.ಕೆ. ಸಂದೇಶ್, ಅಂಬೂಗ ಮಲ್ಲೇಶ್, ಆರ್.ಪಿ.ಐ. ಸತೀಶ್, ಹೆತ್ತೂರು ನಾಗರಾಜು, ಮುಬಾಶೀರ್ ಅಹಮದ್, ರಾಜೇಶ್, ಈರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

You cannot copy content of this page

Exit mobile version