Home ಬ್ರೇಕಿಂಗ್ ಸುದ್ದಿ ನಗರದಲ್ಲಿ ಆ.2 ರಂದು ಮಾಧ್ಯಮ ದಿನಾಚರಣೆ – ಕೆ.ಹೆಚ್. ವೇಣುಕುಮಾರ್

ನಗರದಲ್ಲಿ ಆ.2 ರಂದು ಮಾಧ್ಯಮ ದಿನಾಚರಣೆ – ಕೆ.ಹೆಚ್. ವೇಣುಕುಮಾರ್

ಹಾಸನ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 2 ರಂದು ಶನಿವಾರ ಮಾಧ್ಯಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್. ವೇಣು ಕುಮಾರ್ ತಿಳಿಸಿದರು.
ಮಾಧ್ಯಮ ದಿನಾಚರಣೆ ಬಗ್ಗೆ ಸಂಘದ ಕಛೇರಿಯಲ್ಲ್ಲಿ ಮಾತನಾಡಿದ ಅವರು, ನಗರದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯ ಕ್ರಮ ಆರಂಭವಾಗಲಿದ್ದು, ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆಶೀರ್ವಾದದೊಂದಿಗೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್ ಅವರ ಗೌರವ ಉಪಸ್ಥಿತಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಶ ಕಾನಮ್ ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ ಎಂದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಟಿ.ವಿ. ಶಿವಾನಂದ ತಗಡೂರು ಆಶಯ ನುಡಿಗಳ ನಾಡಲಿದ್ದು, ಕನ್ನಡಪ್ರಭ ಮತ್ತು ಏಶಿಯನೆಟ್ ಪ್ರಧಾನ ಸಂಪಾದಕರಾದ ರವಿ ಹೆಗಡೆ ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್ ವೇಣುಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ. ಮದನ ಗೌಡರು ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಶಾಸಕ ಎಚ್.ಪಿ.ಸ್ವರೂಪ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಐಎಫ್‌ಡಬ್ಲೂಜೆ ಅಧ್ಯಕ್ಷ ಬಿ. ವಿ ಮಲ್ಲಿಕಾರ್ಜುನಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್ ಪೂರ್ಣಿಮಾ, ಹಿರಿಯ ವಾರ್ತಾಧಿಕಾರಿ ಮೀನಾಕ್ಷಮ್ಮ, ಮಾಜಿ ಎಂಎಲ್ಸಿ ಎಮ್.ಎ. ಗೋಪಾಲಸ್ವಾಮಿ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆವ್ವಾನಿತ ರವಿ ನಾಗಲಗೂಡು , ಕಾಂಗ್ರೆಸ್ ಮುಖಂಡ ಎಂ.ಸಿ. ಕೃಷ್ಣೇಗೌಡ, ಉದ್ಯಮಿ ಎನ್. ಆರ್ ಅನಂತ್, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ದೇವರಾಜೇಗೌಡ, ಉದ್ಯಮಿ ಲಕ್ಮಣ ಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.


ಇದೇ ವೇಳೆ ಸಂಘದ ಮಾಜಿ ಅಧ್ಯಕ್ಷರಾದ ಕೆ.ಆರ್ ಮಂಜುನಾಥ್, ಎಸ್.ಆರ್ ಪ್ರಸನ್ನ ಕುಮಾರ್ ಹಾಗೂ ಕೆ ಯುಡಬ್ಲ್ಯೂಜೆ ರಾಜ್ಯ ಪ್ರಶಸ್ತಿ ಹಾಗೂ ಜ್ಞಾನದೀಪ ಪತ್ರಿಕೆ ಸಂಪಾದಕರಾದ ಡಿ.ಜೆ. ರಾಜಗೋಪಾಲ್ ಅವರಿಗೆ ವಿಶೇಷ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ. ಮಾಧ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುಟುಂಬಕ್ಕೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಪತ್ರಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ಜಿಲ್ಲೆಯ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಗುವುದು ಮತ್ತು ಪತ್ರಕರ್ತರ ಕುಟುಂಬದ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು. ಪ್ರತಿ ವರ್ಷದಂತೆ ಈ ವರ್ಷವೂ ಪತ್ರಿಕ ದಿನಾಚರಣೆ ಯನ್ನು ಆಚರಿಸಲಾಗುತ್ತಿದ್ದು, ಮಳೆ ಹಾಗೂ ಇತರ ಕಾರಣಗಳಿಂದ ಆಗಸ್ಟ್ 2 ರಂದು ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪತ್ರಕರ್ತರು ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊ ಳಿಸಬೇಕು ಎಂದು ಅಧ್ಯಕ್ಷರು ಮನವಿ ಮಾಡಿದರು.

You cannot copy content of this page

Exit mobile version