Saturday, April 5, 2025

ಸತ್ಯ | ನ್ಯಾಯ |ಧರ್ಮ

ಮೀಸಲಾತಿ : ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಇಂದು ನಡೆದ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಿಸುವ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿದೆ.

ಪ.ಜಾತಿ ಮತ್ತು ಪ.ವರ್ಗ ಜನಾಂಗದವರಿಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಉಭಯ ಸದನಗಳ ನಾಯಕರು ಸೇರಿ ಅಕ್ಟೋಬರ್‌ 7ರಂದು ನಡೆಸಿದ ಸರ್ವಪಕ್ಷ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ವರದಿಗಳನ್ನು ಆಧರಿಸಿ ಪ.ಜಾತಿ ಜನಾಂಗದವರ ಶೇ.15 ರಿಂದ ಶೇ 17 ಹಾಗೆಯೇ ಪ.ವರ್ಗ ದವರಿಗೆ ಶೇ.3 ರಿಂದ ಶೇ 7 ಮೀಸಲಾತಿಯನ್ನು ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದ್ದರು.

ಈ ಕುರಿತು ಇಂದು ನಡೆದ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಿಸುವ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿದೆ. ಎಂದು ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page