Wednesday, August 20, 2025

ಸತ್ಯ | ನ್ಯಾಯ |ಧರ್ಮ

ತಮ್ಮ ನೋವು ಕೇಳುವವರಿಲ್ಲದೆ ಆತ್ಮ-ಹತ್ಯೆಗೆ ಬಲಿಯಾಗುತ್ತಿರುವ ಪುರುಷರು: ತಜ್ಞರ ಕಳವಳ

ದೆಹಲಿ: ಪುರುಷರಲ್ಲಿ ಮಾನಸಿಕ ಸಮಸ್ಯೆಗಳು ದಿನೇ ದಿನೇ ಹೆಚ್ಚುತ್ತಿವೆ ಎಂದು ಮನೋವೈದ್ಯರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಸಮಾಜದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶಗಳ ಕೊರತೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಕಾನೂನು ಮಾರ್ಗಗಳ ಕೊರತೆಯಿಂದಾಗಿ ಬಲಿಪಶುಗಳು ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

ಪರಿಣಾಮವಾಗಿ, ಪುರುಷರಲ್ಲಿ ಆತ್ಮಹತ್ಯೆಗಳು ಹೆಚ್ಚುತ್ತಿವೆ. 2022 ರಲ್ಲಿ ಭಾರತದಲ್ಲಿ ದಾಖಲಾದ ಆತ್ಮಹತ್ಯೆ ಪ್ರಕರಣಗಳಲ್ಲಿ 72% ಪುರುಷರಿಗೆ ಸಂಬಂಧಿಸಿದ್ದು ಎಂದಿರುವ NCRB ವರದಿಯನ್ನು ಉಲ್ಲೇಖಿಸಿ ಈ ಹೇಳಿಕೆ ನೀಡಲಾಗಿದೆ. ಕೌಟುಂಬಿಕ ಹಿಂಸಾಚಾರ ಪ್ರಕರಣಗಳು, ಲೈಂಗಿಕ ಕಿರುಕುಳ ಪ್ರಕರಣಗಳು, ಕಾನೂನು ಕಿರುಕುಳ, ಭಾವನಾತ್ಮಕ ಕಿರುಕುಳ ಮತ್ತು ಸುಳ್ಳು ಆರೋಪಗಳು ಪುರುಷರಲ್ಲಿ ಬಹಳಷ್ಟು ಮಾನಸಿಕ ಸಂಘರ್ಷಕ್ಕೆ ಕಾರಣವಾಗುವ ಅಂಶಗಳಾಗಿವೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

ಈ ವಿಷಯಗಳಲ್ಲಿ ಪುರುಷರು ಪರಿಹಾರ ಪಡೆಯಲು ಸಾಕಷ್ಟು ಕಾನೂನು ಮಾರ್ಗವಿಲ್ಲ ಮತ್ತು ಇದನ್ನು ತಕ್ಷಣವೇ ಪರಿಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಹರಿಯಾಣದಲ್ಲಿ ಇತ್ತೀಚೆಗೆ ನಡೆಸಲಾದ ಅಧ್ಯಯನದಲ್ಲಿ, ಶೇ. 52.4ರಷ್ಟು ವಿವಾಹಿತ ಪುರುಷರು ಲಿಂಗ ತಾರತಮ್ಯವನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ಈ ಅಧ್ಯಯನವನ್ನು ಸಹ ಮನೋವೈದ್ಯಕೀಯ ತಜ್ಞರು ಉಲ್ಲೇಖಿಸಿದ್ದಾರೆ. ಪುರುಷರ ಮಾನಸಿಕ ಸಮಸ್ಯೆಗಳನ್ನು ನಿರ್ಲಕ್ಷಿಸುವುದರಿಂದ ಈ ಪರಿಸ್ಥಿತಿ ಉದ್ಭವಿಸುತ್ತಿದೆ ಮತ್ತು ಇದನ್ನು ಪರಿಹರಿಸಲು ಕಾನೂನು ಸುಧಾರಣೆಗಳು ಅಗತ್ಯವಿದೆ ಎಂದು ಇಂಡಿಯನ್ ಕ್ಲಿನಿಕಲ್ ಮನಶ್ಶಾಸ್ತ್ರಜ್ಞರ ಸಂಘದ ಪ್ರಧಾನ ಕಾರ್ಯದರ್ಶಿ ಶ್ವೇತಾ ಶರ್ಮಾ ಹೇಳುತ್ತಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 – 25497777.

Related Articles

ಇತ್ತೀಚಿನ ಸುದ್ದಿಗಳು

You cannot copy content of this page