Sunday, September 28, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ( karnataka) ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಮಳೆ (rain) ಅಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.ಇನ್ನು, ಸೆಪ್ಟೆಂಬರ್ 28 ಹಾಗೂ 29ಕ್ಕೆ ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 30 ರವರೆಗೂ ಮಳೆ : ಸೆಪ್ಟೆಂಬರ್ ಅಂತ್ಯದವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ 14 ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್​ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ಎಚ್ಚರಿಕೆ ನೀಡಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ನಗರದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಲ್ಲಿ 2 ದಿನ ಮಳೆ ಸುರಿಯಲಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹ ಇರಲಿದೆ. ಇನ್ನು ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಸದ್ಯ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿಂತಿದ್ದ ಮಳೆರಾಯನ ಆರ್ಭಟ ಇದೀಗ ಮತ್ತೆ ಚುರುಕು ಪಡೆದಿದೆ. ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. ಮಳೆ ಮತ್ತಷ್ಟು ಸುರಿಯುವ ಆತಂಕ ಎದುರಾಗಿದೆ. ಹೆಚ್ಚು ಮಳೆ ರೈತಾಪಿ ವರ್ಗಕ್ಕೆ ಸಂಕಷ್ಟ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page