Thursday, August 29, 2024

ಸತ್ಯ | ನ್ಯಾಯ |ಧರ್ಮ

ವಾಯುಭಾರ ಕುಸಿತ ; ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರದ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಇಂದಿನಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯ ಆರ್ಭಟ ಇನ್ನಷ್ಟು ಹೆಚ್ಚಲಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದರ ಜೊತೆ ಜೊತೆಗೇ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದ ಮಲೆನಾಡು ಭಾಗಗಳಾದ ಸಕಲೇಶಪುರ ತಾಲ್ಲೂಕು ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಒಳನಾಡಿನಲ್ಲಿ ಮಳೆ ಹೆಚ್ಚುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಆಗಲಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲೂ ಮಳೆ ತನ್ನ ಅಬ್ಬರ ತೋರಿಸಲಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ಮೈಸೂರು, ತುಮಕೂರು, ಹಾಸನ ಬೆಳಗಾವಿ, ಧಾರವಾಡ ಭಾಗದಲ್ಲೂ ಮಳೆ ಹೆಚ್ಚುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಿಗೆ ಮಳೆಯಿಂದ ಇಂದು ಮತ್ತು ನಾಳೆ ಕಂಟಕವೇ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಗುರುವಾರ ಸಂಜೆಯ ನಂತರ ಮಳೆಯ ಆರ್ಭಟ ಬೆಂಗಳೂರಲ್ಲಿ ಜಾಸ್ತಿ ಆಗಲಿದ್ದು, ಶುಕ್ರವಾರ, ಶನಿವಾರ & ಭಾನುವಾರ ಕೂಡ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page