Friday, August 22, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಪ್ರವಾಹದ ಸ್ಥಿತಿಗೆ ಸ್ಪಂದಿಸದ ಡಿಸಿ: ಮುಖ್ಯಕಾರ್ಯದರ್ಶಿಗೆ ದೂರು ಸಲ್ಲಿಸಿದ ದೆಹಲಿ ಸಚಿವೆ ಅತಿಶಿ

ಹೊಸ ದೆಹಲಿ: ದೆಹಲಿ PWD ಸಚಿವರಾದ ಅತಿಶಿ ಶನಿವಾರ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಪ್ರವಾಹ ಪರಿಹಾರ ಶಿಬಿರಗಳಲ್ಲಿ ನೀರು ಮತ್ತು ಶೌಚಾಲಯಗಳ ಕೊರತೆಯನ್ನು ತಕ್ಷಣವೇ ಪರಿಹರಿಸುವಂತೆ ಹೇಳಿದ್ದಾರೆ.

‘ಪರಿಹಾರ ಶಿಬಿರಗಳಲ್ಲಿ ನೀರು ಹಾಗೂ ಶೌಚಾಲಯಗಳ ಕೊರತೆಯಿದೆ. ಸರಿಯಾದ ವಿದ್ಯುತ್‌ ಸಂಪರ್ಕವಿಲ್ಲ. ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ದೂರುಗಳು ನಿನ್ನೆಯಿಂದಲೂ ಕೇಳಿಬರುತ್ತಿವೆ. ವಿಭಾಗೀಯ ಆಯುಕ್ತರನ್ನು ಸಂಪರ್ಕಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. ಆದರೆ, ಅವರು ನನ್ನ ಕರೆಗಳಿಗಾಗಲೀ, ಸಂದೇಶಗಳಿಗಾಗಲೀ ಸ್ಪಂದಿಸುತ್ತಿಲ್ಲ’ ಎಂದು ಅವರು ದೂರಿದ್ದಾರೆ.

ಪ್ರವಾಹದ ಕಾರಣದಿಂದಾಗಿ ಅವರವರ ಮನೆಗಳಿಂದ ಸ್ಥಳಾಂತರಗೊಂಡಿರುವ ನಗರದ ಪ್ರತಿಯೊಬ್ಬ ವ್ಯಕ್ತಿಗೂ ಸಾಧ್ಯವಾದ ಮಟ್ಟಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page