ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ – ವೆಂಟಿಲೇಟರ್‌ನಲ್ಲಿ ಚಿಕಿತ್ಸೆ, ಶ್ವಾಸಕೋಶ ಕಸಿ ಸಿದ್ಧತೆ

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ನಗರದ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ವೆಂಟಿಲೇಟರ್‌ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ ಸಚಿವರಿಗೆ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ. ವೈದ್ಯಕೀಯ ತಂಡವು ಅವರ ಸ್ಥಿತಿಯನ್ನು ಸಮೀಪದಿಂದಲೇ ಗಮನಿಸುತ್ತಿದ್ದು, ನಿರಂತರ ನಿಗಾವಹಿಸಲಾಗಿದೆ.

ಇದಲ್ಲದೆ, ಸಚಿವರ ಸ್ಥಿತಿಯನ್ನು ಪರಿಗಣಿಸಿ ಶ್ವಾಸಕೋಶ ಕಸಿ (ಲಂಗ್ಸ್ ಟ್ರಾನ್ಸ್‌ಪ್ಲಾಂಟೇಶನ್) ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಖ್ಯಾತ ವೈದ್ಯರಾದ ಡಾ. ವೆಂಕಟಗಿರಿ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಸಚಿವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಮಹತ್ವದ ಸುಧಾರಣೆ ಕಾಣಿಸದಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲ ಗಂಟೆಗಳು ನಿರ್ಣಾಯಕವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು