Wednesday, September 24, 2025

ಸತ್ಯ | ನ್ಯಾಯ |ಧರ್ಮ

ಹಾಸನದಲ್ಲಿ 10 ಗಂಟೆಗಳ ಕೆಡಿಪಿ ಸಭೆ, ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡ

ಹಾಸನ : ಹತ್ತು ಗಂಟೆಗಳ ಕೆಡಿಪಿ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಕಠಿಣ ಎಚ್ಚರಿಕೆ ಹಾಸನ  ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಕೆಡಿಪಿ (ಕೃಷಿ ಅಭಿವೃದ್ಧಿ ಮತ್ತು ಪ್ರಗತಿ) ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನಿರಂತರವಾಗಿ ಹತ್ತು ಗಂಟೆಗೂ ಹೆಚ್ಚು ಕಾಲ ನಡೆಸಿದರು.

ಸಭೆಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಲೋಕೋಪಯೋಗಿ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಚಿವರು ನೇರವಾಗಿ ಪ್ರಶ್ನಿಸಿ ಬೆವರಿಳಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ನಾನು ಸಾಸಿವೆ ಕಾಳಷ್ಟಾದರೂ ಕೊಡುಗೆ ನೀಡಲು ಬಂದಿದ್ದೇನೆ. ಅದಕ್ಕೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು, ಇಲ್ಲವಾದಲ್ಲಿ ಸರಿಯಾದ ಸಮಯಕ್ಕೆ ಸರಿಯಾದ ಕ್ರಮ ಕೈಗೊಳ್ಳುತ್ತೇನೆ,” ಎಂದು ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಶಾಸಕರಾದ ಸಿ.ಎನ್‌. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಎಚ್.ಕೆ. ಸುರೇಶ್, ಡಿಸಿ, ಸಿಇಓ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page