ಹಾಸನ : ನಗರದ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಾರ್ವಜನಿಕ ಸೇವೆಗೆ ಕಾರ್ಯರಂಭ ಮಾಡಲು ಹಾಗೂ ಅಗತ್ಯ ಸಲಕರಣೆಗಳು ಒದಗಿಸಿ ಅಗತ್ಯವಿರುವ ಅನುಧಾನ ಬಿಡುಗಡೆಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತಾ ರಕ್ಷಣಾ ವೇದಿಕೆಯಿಂದ ಬುಧವಾರದಂದು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಇದೆ ವೇಳೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತಾ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಮೀರ್ ಅಹಮದ್ ಮಾತನಾಡಿ, ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಆರ್.ಸಿ. ರಸ್ತೆ ಗಂಧದಕೋಠಿ ಆವರಣದಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಹಿಮ್ಸ್) ಸೊಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಕಟ್ಟಡ ನಿರ್ಮಿಸಿರುವುದು ಸ್ವಾಗತಾರ್ಹ. ನಗರದಲ್ಲಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಹಿಮ್ಸ್ ಆಸ್ಪತ್ರೆ ಬಳ ಸುಸಜ್ಜಿತವಾದ ಆಸ್ಪತ್ರೆಗಳು, ಸಾರ್ವಜನಿಕರ ಸೇವೆ ನಿರ್ವಹಿಸುತ್ತಿದ್ದು, ಬಹುತೇಕ ಬಡ ರೋಗಿಗಳಿಗೆ ಅನು ಕೂಲವಾಗಿ ನೂತನವಾಗಿ ನಿರ್ಮಿಸಿರುವ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ ಎಂದರು. ಇದು ಹಾಸನ ನಗರಕ್ಕೆ ಅತ್ಯಗತ್ಯ. ಇದರಿಂದ ದೂರಗಾಮಿ ಜಿಲ್ಲೆಗಳಿಂದ ಬರುವ ರೋಗಿಗಳಿಗೂ ತುಂಬಾ ಅನುಕೂಲ. ಸಮಯ ಖರ್ಚು ವೆಚ್ಚ ಆಗಲಿದೆ. ಹಾಸನ ಜಿಲ್ಲೆಗೆ ಹತ್ತಿರವಿರುವ ಜಿಲ್ಲೆಗಳು ಹಾಗೂ ತಾಲ್ಲೂಕುಗಳಿಂದ ಬಡ ಹಾಗೂ ಮದ್ಯಮ ವರ್ಗದ ರೋಗಿಗಳಿಗೆ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಿದೆ.
ಈ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ, ನರರೋಗ, ನರ ರೋಗ, ಮೂತ್ರ ಪಿಂಡ,ಗ್ಯಾಸ್ಟೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗ ತಪಾಸಣೆಯ ಹತ್ತು ಹಲವು ವಿಶೇಷ ವಿಭಾಗಗಳ ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ. ಆಸ್ಪತ್ರೆಯ ಕಟ್ಟಡದ ಬಹುತೇಕ ಕಾಮಗಾರಿ ಮುಗಿದಿದ್ದು, ಉಳಿದಿರುವ ಕಾಮಗಾರಿ ತುರ್ತಾಗಿ ಆಗಬೇಕಿದೆ. ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಯಂತ್ರೋಪಕರಣಗಳು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ನೇಮಕಾತಿ ಅಗತ್ಯ ವಿರುವ ಅನುಧಾನ ಸರ್ಕಾರ ಕೊಡಲೆ ಬಿಡುಗಡೆಗೊಳಿಸಿ ಬಡ ಹಾಗೂ ಮಧ್ಯಮ ವರ್ಗದ ಜಿಲ್ಲೆ ಹಾಗೂ ಹೊರಜಿಲ್ಲೆ ರೋಗಿಗಳಿಗೆ ಚಿಕಿತ್ಸೆ ಪಡೆದು ಗುಣಮುಖರಾಗಲು ಸರ್ಕಾರಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಕರ್ನಾಟಕ ಸರ್ಕಾರ ತ್ರರಿತಗತಿಯಲ್ಲಿ ಕ್ರಮ ವಹಿಸಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ ಎಂದು ಹೇಳಿದರು. ಇದೆ ವೇಳೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತಾ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅಮೀರ್ ಜಾನ್ ಸಾಬ್,ಯೂನುಸ್ ಪಾಶ, ಸಯ್ಯಾದ್ ಸನಾಉಲ್ಲಾ, ವೀರ ಕನ್ನಡಿಗ ಟಿಪ್ಪು ಸೇನೆ ಸಂಸ್ಥಾಪಕ ಅಕ್ಮಲ್ ಜಾವೀದ್, ಸಿಐಟಿಯು ಕಾರ್ಯದರ್ಶಿ ಅರವಿಂದ್ ಇತರರು ಉಪಸ್ಥಿತರಿದ್ದರು.