Home ದೇಶ ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಜೀವ ದಹನ

ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಜೀವ ದಹನ

0

ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಏಪ್ರಿಲ್ 22ರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಕಂಕರ ತುಂಬಿದ್ದ ಟ್ರಕ್ ಬ್ರೇಕ್ ಫೇಲ್ ಆದ ಪರಿಣಾಮ ಈ ಸಾವು-ನೋವಿಗೆ ಕಾರಣವಾಗಿದೆ.

ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಾರು ಮತ್ತು ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನದಲ್ಲಿ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಹೊರಬರಲಾಗದೆ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದವರೂ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 11ಕ್ಕೆ ಏರಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮಿರ್ಜಾಪುರ ಎಸ್‌ಪಿ ಅಪರ್ಣಾ ರಜತ್ ಕೌಶಿಕ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You cannot copy content of this page

Exit mobile version