ಡಿಎಂಕೆ ಅಧ್ಯಕ್ಷರಾಗಿ ಎಂ.ಕೆ.ಸ್ಟಾಲಿನ್‌ ಅವಿರೋಧ ಆಯ್ಕೆ

ಚೆನ್ನೈ: ಭಾನುವಾರ ಚೆನ್ನೈನಲ್ಲಿ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಧೀಮಂತ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಹೊಸದಾಗಿ ರಚನೆಯಾದ ಸಾಮಾನ್ಯ ಮಂಡಳಿ ಸಭೆಯಲ್ಲಿ, ಪಕ್ಷದ ಉನ್ನತ ಹುದ್ದೆಗೆ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಡಿಎಂಕೆ ಘೋಷಿಸಿದೆ. ಈ ಮೂಲಕ ಸ್ಟಾಲಿನ್‌ ಅವರು 2 ನೇ ಭಾರಿಗೆ ಅವಿರೋಧವಾಗಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಡಿಎಂಕೆ ಪಕ್ಷದ ಹಿರಿಯರಾದ ದುರೈಮುರಗನ್‌ ಮತ್ತು ಟಿ.ಆರ್‌.ಬಾಲು ಅವರೂ ಸಹ ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ (ಕೋಶಾಧಿಕಾರಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು