Saturday, August 9, 2025

ಸತ್ಯ | ನ್ಯಾಯ |ಧರ್ಮ

ಎಲ್ಲಾ ಶಾಸಕರಿಗು ಸಮನಾಗಿ ಅನುದಾನ ನೀಡಿ ಸರಕಾರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹ

ಹಾಸನ : ಕಾಂಗ್ರೆಸ್ ಸರಕಾರದಲ್ಲಿ ಎಲ್ಲಾ ಶಾಸಕರನ್ನ ಸಮನಾಗಿ ಪರಿಗಣಿಸಿ ನೀಡುವ ಅನುದಾನದಲ್ಲಿ ತಾರತಮ್ಯ ಮಾಡಬಾರದು ಪಕ್ಷಾತೀತವಾಗಿ ಸಮಾನ ಅನುದಾನ ಹಂಚಿಕೆ ಮಾಡಬೇಕು ಎಂದು ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲಿಯೂ ಎಲ್ಲಾ ಪಕ್ಷದ ಕಾರ್ಯಕರ್ತರು ಮುಖಂಡರು, ಮತದಾರರು ಇದ್ದಾರೆ ಆದರೆ ಕಾಂಗ್ರೆಸ್ ಶಾಸಕರಿಗೆ ಹೆಚ್ಚು ಅನುದಾನ ಹಾಗೂ ಜೆಡಿಎಸ್, ಬಿಜೆಪಿ ಶಾಸಕರಿಗೆ ಕಡಿಮೆ ಅನು ದಾನ ನೀಡುವುದು ಸರಿಯಾದ ಬೆಳವಣಿಗೆ ಅಲ್ಲ ಎಂದರು. ಈಗಾಗಲೇ ರಾಜ್ಯಾದ್ಯಂತ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಯಥೇಚ್ಛವಾಗಿ ಸುರಿದಿದ್ದು ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ ಇದರಿಂದ ರಾಷ್ಟ್ರಗಳು ಸಂಪೂರ್ಣ ಹಾಳಾಗಿದ್ದು, ಹೆಚ್ಚಿನ ಅನುದಾನದ ಅಗತ್ಯ ಇದೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಒದಗದ ಮೂಲಕ ಎಲ್ಲಾ ಶಾಸಕರಿಗೂ ಸಮನಾಗಿ ಅನುದಾನ ಹಂಚಿಕೆ ಮಾಡುವ ಬಗ್ಗೆ ಸರಕಾರ ಯೋಚಿಸಬೇಕಾಗಿದೆ. ಕಳೆದ ಸರಕಾರದ ಅವಧಿಯಲ್ಲಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ ಅದರಂತೆ ಈ ಸರ್ಕಾರದ ಅವಧಿಯಲ್ಲಿ ಕೂಡ ಶಾಸಕರನ್ನು ಸಮಾನವಾಗಿ ಪರಿಗಣಿಸಬೇಕು ಶಾಸಕರನ್ನು ಅನುದಾನಕ್ಕಾಗಿ ಭಿಕ್ಷೆ ಬೇಡುವ ಸ್ಥಿತಿಗೆ ಸರ್ಕಾರ ತರಬಾರದು ಎಂದು ತಿಳಿಸಿದರು. ಇದೇ ವೇಳೆ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಹಿಂದೂಗಳ ಶ್ರಾದ್ಧ ಭಕ್ತಿ ಕೇಂದ್ರವಾಗಿ ಹೆಸರುವಾಸಿಯಾಗಿದೆ, ಇಂತಹ ಸ್ಥಳದ ಮೇಲೆ ಕೆಟ್ಟ ಹೆಸರು ತರುವ ಕೆಲಸ ಆಗಬಾರದು. ಈಗಾಗಲೆ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಈ ನಾಡಿಗೆ ಎಲ್ಲಾ ವರ್ಗದ ಜನರಿಗೂ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದರು. ತನಿಖೆ ಶಾಂತಿರುವಾಗಿ ನಡೆಯಲಿ ಅಲ್ಲಿನ ಇತ್ತಿಚಿನ ಬೆಳವಣಿಗೆ ಹಾಗೂ ಗಲಾಟೆ ಗದ್ದಲಗಳು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುವ ಕೆಲಸ ನಡೆಯುತ್ತಿದೆ. ದುರುದ್ದೇಶದ ತನಿಖೆ ನಡೆಯಬಾರದು ಸಮಗ್ರ ತನಿಖೆ ಬಳಿಕ ಅತೀ ಅಗ್ರವಾಗಿ ವರದಿ ಬಹಿರಂಗಪಡಿಸಿ ಸತ್ಯಾಸತ್ಯತೆ ಜನರಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page