Wednesday, March 26, 2025

ಸತ್ಯ | ನ್ಯಾಯ |ಧರ್ಮ

ನಗರದ ವಿವಿಧ ಬಡಾವಣೆಗಳಿಗೆ ಶಾಸಕ ಹೆಚ್.ಪಿ. ಸ್ವರೂಪ್ ಭೇಟಿ, ಪರಿಶೀಲನೆ


ಹಾಸನ: ನಗರದ ಬಿ.ಟಿ. ಕೊಪ್ಪಲು, ಎಸ್.ಬಿ.ಎಂ. ಕಾಲೋನಿ ಹಾಗೂ ಬಿ. ಕಾಟಿಹಳ್ಳಿ ಬಡಾವಣೆಗಳಿಗೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲ್ಲಿನ ಸಮಸ್ಯೆಗಳ ಬಗ್ಗೆ ನಿವಾಸಿಗಳಿಂದ ಮನವಿ ಸ್ವೀಕರಿಸಿದರು.ಬಡಾವಣೆಗಳಲ್ಲಿ ಯುಜಿಡಿ ಹಾಗೂ ಒಳಚರಂಡಿ ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಕರ್ನಾಟಕ ಒಳಚರಂಡಿ ಹಾಗೂ ನೀರು ಸರಬರಾಜು ಇಲಾಖೆ ಹಾಗೂನಗರಸಭೆ ಅಧಿಕಾರಿಗಳ ಜೊತೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಈ ಬಡಾವಣೆಗಳಲ್ಲಿ ಕಳೆದ ಹಲವು ದಿನಗಳಿಂದ ಯುಜಿಡಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು. ಬಡಾವಣೆಗಳಿಗೆ ಪ್ರಮುಖವಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳ ಪೈಕಿ ಯುಜಿಡಿ ಪ್ರಮುಖವಾಗಿದೆ, ಕೂಡಲೇ ವೈಜ್ಞಾನಿಕವಾಗಿ ಕಾಮಗಾರಿ ನಡೆಸಿ, ಬಡಾವಣೆ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಸೂಚನೆ ನೀಡಿದರು. ಈ ವೇಳೆ ನಗರಸಭೆ ಹಾಗೂ ಕರ್ನಾಟಕ ಒಳಚರಂಡಿ ಹಾಗೂ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಕರ್ತರುಗಳು, ಮುಖಂಡರುಗಳು, ಸಾರ್ವಜನಿಕರು, ಸ್ಥಳೀಯರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page